bhadravati chain theft case ಜುಲೈ 03 :  ಬೈಕ್​​ನಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು

prathapa thirthahalli
Prathapa thirthahalli - content producer

bhadravati chain theft case : ಬೈಕ್​​ನಲ್ಲಿ ತೆರಳುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿದ ಕಳ್ಳರು

bhadravati chain theft case : ಭದ್ರಾವತಿ: ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ 51 ಗ್ರಾಂ ತೂಕದ, 4.50 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಕಸಿದುಕೊಂಡು ಹೋಗಿರುವ ಘಟನೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳು ಸಂಘದ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಭದ್ರಾವತಿಯ ಮಹಿಳೆಯೊಬ್ಬರು, ಜೂನ್ 30 ರಂದು ಸಂಜೆ ಕೆಲಸ ಮುಗಿಸಿಕೊಂಡು ತಮ್ಮ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ, ಅವರನ್ನು ಹಿಂಬಾಲಿಸಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು, ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಬಂಗಾರದ ಸರವನ್ನು ಕಸಿದುಕೊಂಡು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಸರಗಳ್ಳತನದ ರಭಸಕ್ಕೆ ಮಹಿಳೆ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದು, ದೇಹಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಮಹಿಳೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

 

Share This Article