Bhadravati court sentenced /ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ವ್ಯಕ್ತಿಯೊಬ್ಬರನ್ನು ಜಾತಿಯ ಹೆಸರಿನಿಂದ ನಿಂದಿಸಿ, ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.73 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಭದ್ರಾವತಿ ಕೋರ್ಟ್ನಲ್ಲಿ ಶಿಕ್ಷೆ
ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿಗಳನ್ನುಸುಣ್ಣದಹಳ್ಳಿ ಗ್ರಾಮದ ನಿವಾಸಿಗಳಾದ ಕಾಂತರಾಜು, ನಾಗೇಶ, ಮಂಜುನಾಥ್ ಮತ್ತು ಪ್ರೇಮ ಎಂದು ಗುರುತಿಸಲಾಗಿದೆ. ಈ ನಾಲ್ವರ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆಯನ್ನು ಪ್ರಕಟಿಸಿದೆ.
ಘಟನೆಯ ವಿವರ
ಇಲ್ಲಿ ಗ್ರಾಮವೊಂದರಲ್ಲಿ ವಿ. ಆರ್ಮುಗಂ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಸರ್ವೇ ಕಾರ್ಯ ನಡೆಸಲಾಗುತ್ತಿತ್ತು. ಈ ಪ್ರಕ್ರಿಯೆ ನಡೆಯುತ್ತಿದ್ದಾಗ ಆರೋಪಿಗಳಾದ ಕಾಂತರಾಜು, ನಾಗೇಶ, ಮಂಜುನಾಥ್ ಮತ್ತು ಪ್ರೇಮ ಅವರು ಜಮೀನಿನ ಬಳಿ ಬಂದು ಸರ್ವೇ ಕಾರ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ವಿ. ಆರ್ಮುಗಂ ಅವರನ್ನು ಜಾತಿಯ ಹೆಸರಿನಲ್ಲಿ ಕೀಳಾಗಿ ನಿಂದಿಸಿದ್ದಲ್ಲದೆ, ಅವರ ಮೇಲೆ ಹಲ್ಲೆಯನ್ನೂ ಮಾಡಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿತ್ತು.

ಪೊಲೀಸ್ ಪ್ರಕರಣ
ಘಟನೆಗೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಮಾನಿಸಿ ಶಿಕ್ಷೆಯನ್ನು ಪ್ರಕಟಿಸಿದೆ.
Bhadravati court sentenced four residents of Sunnadahalli village to two years in prison and imposed a fine of Rs 1.73 lakh in a caste abuse and assault case
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.