ಭದ್ರಾವತಿಯಲ್ಲಿ 112ಗೆ ಬಂತು 3 ತುರ್ತು ಕರೆ; ಗಿಡದ ವಿಚಾರಕ್ಕೆ ಗಲಾಟೆ, ಕಳ್ಳತನದವಾಗಿದೆ ಎಂದು ಕರೆದ ಮಧ್ಯಪಾನಿ , ಕಾಂಪೌಂಡ್ ಕಿರಿಕ್​ಗೆ ಪೊಲೀಸ್ ಎಂಟ್ರಿ

ಹಂಚಿಕೊಳ್ಳಿ
WhatsApp Facebook X Telegram
shivamogga crime news iamge
shivamogga police

ಸುದ್ದಿಯ ಸ್ಥಳ: Bhadravati, Shivamogga, Karnataka

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತುರ್ತು ಸಹಾಯವಾಣಿ 112ಕ್ಕೆ ಬಂದ ಮೂರು ಪ್ರತ್ಯೇಕ ಕರೆಗಳಿಗೆ ಸ್ಪಂದಿಸಿದ ಪೊಲೀಸರು ಸ್ಥಳಕ್ಕೆ ತೆರಳಿ ಸಂಬಂಧಪಟ್ಟವರಿಗೆ ತಿಳಿವಳಿಕೆ ಹಾಗೂ ಎಚ್ಚರಿಕೆ ನೀಡಿದ್ದಾರೆ.ಈ ಬಗ್ಗೆ ಮಾಹಿತಿ ಹೀಗಿದೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೂವಿನ ಗಿಡದದಲ್ಲಿ ಹೂವು ಕೀಳುವ ವಿಚಾರವಾಗಿ ಗಲಾಟೆ ನಡೆಯುತ್ತಿರುವ ಬಗ್ಗೆ 112ಕ್ಕೆ ಕರೆ ಬಂದಿತ್ತು. ಮಾಹಿತಿ ಪಡೆದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಸಂಬಂಧಪಟ್ಟವರಿಗೆ ಸೂಕ್ತ ತಿಳಿವಳಿಕೆ ನೀಡಿ ಎಚ್ಚರಿಸಿದ್ದಾರೆ.

ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಕಳ್ಳತನವಾಗಿದೆ ಎಂದು ವ್ಯಕ್ತಿಯೊಬ್ಬರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ಆದರೆ, ಮದ್ಯಪಾನದ ಅಮಲಿನಲ್ಲಿ ಅವರು ಕಳ್ಳತನದ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದು ತಿಳಿದುಬಂದಿದ್ದು, ಸಿಬ್ಬಂದಿ ಅವರಿಗೆ ಸೂಕ್ತ ತಿಳಿವಳಿಕೆ ಹಾಗೂ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಭದ್ರಾವತಿ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಂಪೌಂಡ್ ವಿಚಾರವಾಗಿ ಅಕ್ಕಪಕ್ಕದ ಮನೆಯವರ ನಡುವೆ ಜಗಳ ನಡೆಯುತ್ತಿರುವ ಬಗ್ಗೆ 112ಕ್ಕೆ ಕರೆ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿದ ತುರ್ತು ಪ್ರತಿಕ್ರಿಯಾ ಸಿಬ್ಬಂದಿ ಸಂಬಂಧಪಟ್ಟವರಿಗೆ ತಿಳಿವಳಿಕೆ ನೀಡಿ ಎಚ್ಚರಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor