ಭದ್ರಾವತಿಯಲ್ಲಿ ಇಂದು 54ನೇ ವರ್ಷದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಹಂಚಿಕೊಳ್ಳಿ
WhatsApp Facebook X Telegram
Bhadravati Ganesh Visarjan Today Police Security and Power Cut Alert
Bhadravati Ganesh Visarjan Today Police Security and Power Cut Alert

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾವತಿ / ಇಲ್ಲಿಮ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 54ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಇಂದು ಅಂದರೆ ಸೆ.22ರ ಮಂಗಳವಾರ ನಡೆಯಲಿದೆ.

9 ದಿನಗಳ ಪ್ರತಿಷ್ಠಾಪನೆ ನಂತರ ವಿಸರ್ಜನಾ ಕಾರ್ಯ ನಡೆಯುತ್ತಿದ್ದು, ಪ್ರತಿ ದಿನ ಧಾರ್ಮಿಕ ಆಚರಣೆಗಳು, ಸಂಜೆ ರಸಮಂಜರಿ ಹಾಗು ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ನಿನ್ನೆ ದಿನ ಸೋಮವಾರ ಬೆಳಿಗ್ಗೆ ಗಣಹೋಮ, ಅನ್ನಸಂತರ್ಪಣೆ ನಂತರ ಹಿಂದೂ ಧಾರ್ಮಿಕ ಸಭೆ ನಡೆಯಿತು. ಇಂದು ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಸೇವಾ ಸಮಿತಿಯಿಂದ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣೆಗೆ ಆಯೋಜಿಸಲಾಗಿದೆ. ಈ ಬಾರಿ ಸಹ ಸಹಸ್ರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಬಂದೋಬಸ್ತ್​

ಪೊಲೀಸ್ ಇಲಾಖೆ ಈ ಬಾರಿ ಸಹ ಮುನ್ನಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತೆ ಕೈಗೊಳ್ಳುತ್ತಿದ್ದು, ಆಯಾ ಕಟ್ಟಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. ಮೆರವಣಿಗೆ ಮೇಲೆ ನಿಗಾವಹಿಸಲು ಸಿಸಿ ಕ್ಯಾಮೆರಾಗಳ ಅಳವಡಿಕೆ, ದ್ರೋಣ್‌ಗಳನ್ನು ಬಳಸಿಕೊಳ್ಳಲಾಗುತ್ತಿದೆ.

ರಾಜಬೀದಿ ಉತ್ಸವ ಮೆರವಣಿಗೆ ಸಮಯದಲ್ಲಿ ಸುರಕ್ಷತೆ ದೃಷ್ಟಿಯಿಂದ ವಿದ್ಯುತ್ ತಂತಿಗಳನ್ನು ಎತ್ತರಕ್ಕೇರಿಸುವ ಕಾರ್ಯ ಹಮ್ಮಿಕೊಳ್ಳುತ್ತಿರುವುದರಿಂದ ಈ ಮಾರ್ಗದಲ್ಲಿ
ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹೊಸಮನೆ ಮುಖ್ಯ ರಸ್ತೆ, ಮಾಧವಚಾರ್ ವೃತ್ತ, ತರೀಕೆರೆ ರಸ್ತೆ, ಗಾಂಧಿ ವೃತ್ತ, ಬಿ.ಎಚ್ ರಸ್ತೆ, ಹಾಲಪ್ಪ ವೃತ್ತ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗ, ಲೋಯರ್ ಹುತ್ತಾ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor