bhadravati : ಮನೆ ಕಳ್ಳತನ ಪ್ರಕರಣ, ಕಳ್ಳನನ್ನು ಮಾಲು ಸಹಿತ ಬಂಧಿಸಿದ ಪೊಲೀಸರು

prathapa thirthahalli
Prathapa thirthahalli - content producer

bhadravati : ಭದ್ರಾವತಿ ನ್ಯೂಟೌನ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಲಕ್ಷಾಂತರ ಮೌಲ್ಯದ ಬಂಗಾರ ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದ ಕಳ್ಳನನ್ನು ಇಂದು ಪೊಲೀಸರು ಬಂಧಿಸಿದ್ದಾರೆ.

bhadravati : ಏನಿದು ಪ್ರಕರಣ 

ಮೇ 02- 2024 ರಂದು ಭದ್ರಾವತಿಯ ಮೀನು ವ್ಯಾಪಾರಿ ಬಾಲಕೃಷ್ಣನ್​​ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಯಾರೋ ಕಳ್ಳರು ಮನೆಯ ಮೇಲಿನ ಸಿಮೆಂಟ್​ ಶೀಟನ್ನು ಒಡೆದು ಮನೆಯ ಒಳಗೆ ಪ್ರವೇಶಿಸಿ ಬೀರುವಿನಲ್ಲಿದ್ದ ಒಂದು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣ, ವಾಚ್ ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಹಿನ್ನಲೆ ಭದ್ರಾವತಿ ನ್ಯೂಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

ಈ ಪ್ರಕರಣ ಸಂಬಂಧ ಪೊಲೀಸರು ತಂಡ ರಚಿಸಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದರು. ಈ ಹಿನ್ನಲೆ ಪೊಲೀಸರಿಗೆ  ಆರೋಪಿಯಾದ ಜೈಕಾಂತ್ ಪಿ, (21 )  ಎಂಬುವವನು ಪೊಲೀಸರಿಗೆ ಮಾಲು ಸಹಿತ ಸಿಕ್ಕಿ ಬಿದ್ದಿದ್ದಾನೆ. ನಂತರ ಆತನನ್ನು ಪೊಲೀಸರು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮೌಲ್ಯ 1,12,000 ರೂಪಾಯಿಗಳ 11 ಗ್ರಾಂ 300 ಮಿಲಿ ತೂಕದ ಬಂಗಾರದ ಅಭರಣ, 2 ಸಾವಿರ ರೂಪಾಯಿ ಮೌಲ್ಯದ ಒಂದು ವಾಚ್ ಮತ್ತು ಕೃತ್ಯಕ್ಕೆ ಬಳಸಿದ ಒಪ್ಪೋ ಮೊಬೈಲ್​ನ್ನು ವಶಪಡಿಸಿಕೊಂಡಿದ್ದಾರೆ.

 

TAGGED:
Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *