bhadravati news : ಭದ್ರಾ ಚಾನೆಲ್ ಗೆ ನೀರು ಕುಡಿಯಲು ಬಂದಿದ್ದ ಜಿಂಕೆಯ ಮರಿಯೊಂದು ನೀರೊಳಗೆ ಬಿದ್ದಿದ್ದು, ಶಿವಮೊಗ್ಗದ ಅಗ್ನಿಶಾಮಕದಳದ ಸಿಬ್ಬಂದಿಗಳು ಜಿಂಕೆ ಮರಿಯನ್ನು ರಕ್ಷಿಸಿದ್ದಾರೆ.ಇಂದು ಬೆಳಿಗ್ಗೆ ಭದ್ರಾವತಿ ತಾಲೂಕು ಕೈಮರದ ಅಶೋಕ ನಗರದ ಭದ್ರಾ ಚಾನೆಲ್ ಗೆ ನೀರು ಕುಡಿಯಲು ಜಿಂಕೆ ಮರಿ ಬಂದಿತ್ತು. ಆ ವೇಳೆ ಆಯಾ ತಪ್ಪಿ ನೀರಿನ ಒಳಗೆ ಬಿದ್ದಿದೆ. ಈ ಹಿನ್ನಲೆ ಅದಕ್ಕೆ ನೀರಿನಿಂದ ಮೇಲೆ ಬರಲು ಸಾಧ್ಯವಾಗಲಿಲ್ಲ. ಇದನ್ನು ಗಮನಿಸಿದ ಸ್ಥಳೀಯರು ಶಿವಮೊಗ್ಗದ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಜಿಂಕೆಮರಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭದ್ರ ನಾಲೆಗಳಲ್ಲಿ ನದಿಯ ಒಳಹರಿವು ಹೆಚ್ಚಾಗಿದ್ದು, ಜಿಂಕೆಯೊಂದು ನೀರಿಗೆ ಸಿಲುಕಿಕೊಂಡಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.
bhadravati news : ಭದ್ರಾ ಚಾನಲ್ಗೆ ಬಿದ್ದಿದ್ದ ಜಿಂಕೆ ಮರಿ ರಕ್ಷಣೆ
This Article Written by / Prathapa thirthahalli / ಮೇ 15, 2025

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


