bhadravati news today : ರೈಲ್ವೆ ಹಳಿಗಳ ಮೇಲೆ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ಭದ್ರಾವತಿ | ಭದ್ರಾವತಿಯ ಗುಂಡಪ್ಪ ಶೆಡ್ ರೈಲ್ವೆ ಟ್ರ್ಯಾಕ್ ಬಳಿ ರೈಲ್ವೆ ಹಳಿಗಳ ಮೇಲೆ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ ಸುಮಾರಿಗೆ ಬೆಂಗಳೂರಿನಿಂದ ತಾಳಗುಪ್ಪಕ್ಕೆ ತೆರಳುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಸ್ಥಳೀಯರು ಶವ ಪತ್ತೆ ಹಚ್ಚಿದ ನಂತರ ಕೂಡಲೇ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.