bhadravati police action / ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ / ಭದ್ರಾವತಿಯಲ್ಲಿಯು ಪೊಲೀಸರು ವೆಹಿಕಲ್ ಸೀಜ್ ಆಫರೇಷನ್ ಆರಂಭಿಸಿದ್ದಾರೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ವಿವಿಧ ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿ ವಾಹನ ನಂಬರ್‌ಪ್ಲೇಟ್ ಹೊಂದಿಲ್ಲದ ಹಾಗೂ ದೋಷಪೂರಿತ ಸೈಲೆನ್ಸರ್‌ಹೊಂದಿರುವ 35 ಬೈಕ್ಗಳ ವಿರುದ್ಧ ಆಕ್ಷನ್ ತೆಗೆದುಕೊಂಡಿದ್ದಾರೆ.
ಸರ್ಕಲ್ ಇನ್ಸ್ಪೆಕ್ಟರ್ ನಾಗಮ್ಮ ನೇತೃತ್ವದಲ್ಲಿ ಸಂಚಾರಿ ಠಾಣೆಯ ಎಸ್ಐ ಚಂದ್ರಶೇಖರ ನಾಯ್ಕ ಹಾಗೂ ರಾಜೇಶ್ ಸಂಗೊಳ್ಳಿ ಮತ್ತು ಸಿಬ್ಬಂದಿ ವಿಶೇಷ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ವಾಹನ ಚಾಲಕರು ಮತ್ತು ಮಾಲೀಕರ ವಾಹನ ದಾಖಲಾತಿಗಳನ್ನು ಪರಿಶೀಲಿಸಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು.
ಅಪಘಾತ ಪ್ರಕರಣಗಳು ಸಹ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯಿಂದ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಾಹನ ಚಾಲಕರು, ಮಾಲೀಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಇಲಾಖೆ ಕೋರಿದೆ.
