ಭದ್ರಾವತಿ : ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಕಳ್ಳತನದ ಆರೋಪಿಯನ್ನು ಬಂಧಿಸಿದ ಪೊಲೀಸರು, ಆರೋಪಿತನಿಂದ  44 ಗ್ರಾಂ ಮೌಲ್ಯದ ಬಂಗಾರ ವಶ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಭದ್ರಾವತಿ : ಭದ್ರಾವತಿ ನಗರದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬಂಗಾರದ ಒಡವೆಗಳ ಕಳವು ಪ್ರಕರಣವನ್ನು ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ  ಬೇಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.  ಹಾಗೆಯೇ ಆರೋಪಿತನಿಂದ ಕಳ್ಳತನವಾದ  ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರದಂತೆ, ಭದ್ರಾವತಿಯ ತಮ್ಮಣ್ಣ ಕಾಲೋನಿ ನಿವಾಸಿಯೊಬ್ಬರು ಕಳೆದ ಸೆಪ್ಟೆಂಬರ್ 16 ರಂದು ಗಾಂಧಿನಗರದ ತಮಿಳ್ ಮೊದಲಿಯಾರ್ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿದ್ದರು. ಮಧ್ಯಾಹ್ನ ಮನೆಗೆ ವಾಪಸಾದ ಅವರು ತಮ್ಮ ಕೊರಳಲ್ಲಿದ್ದ ಬಂಗಾರದ ಮಾಂಗಲ್ಯ ಸರವನ್ನು ತೆಗೆದು ಮನೆಯ ಬೀರುವಿನಲ್ಲಿ ಇಟ್ಟು ಬಳಿಕ ವ್ಯಾಪಾರಕ್ಕೆ ತೆರಳಿದ್ದರು. ನಂತರ ಅಕ್ಟೋಬರ್ 09 ರಂದು ರಾತ್ರಿ ಬೆಂಗಳೂರಿನಲ್ಲಿರುವ ಮಗಳ ಬಳಿ ತೆರಳಲು ಸಿದ್ಧತೆ ನಡೆಸುತ್ತಿದ್ದ ವೇಳೆ ಬೀರು ಪರಿಶೀಲಿಸಿದಾಗ, ಲಾಕರ್‌ನಲ್ಲಿದ್ದ 44 ಗ್ರಾಂ ತೂಕದ ಮಾಂಗಲ್ಯ ಸರ ಹಾಗೂ ತಲಾ 1 ಗ್ರಾಂ ತೂಕದ 4 ಚಿನ್ನದ ಉಂಗುರಗಳು ಸೇರಿದಂತೆ ಒಟ್ಟು 48 ಗ್ರಾಂ ತೂಕದ ಅಂದಾಜು 4.80 ಲಕ್ಷ ರೂಪಾಯಿ ಮೌಲ್ಯದ ಒಡವೆಗಳು ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಅಕ್ಟೋಬರ್ 12 ರಂದು ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಹಿನ್ನೆಲೆ ಭದ್ರಾವತಿ ಉಪವಿಭಾಗದ ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆ ಹಾಗೂ ಸಿಪಿಐ ನಾಗಮ್ಮ ಅವರ ಮಾರ್ಗದರ್ಶನದಲ್ಲಿ ಹೊಸಮನೆ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದಪ್ಪ ಎಂ.ಪಿ. ಹಾಗೂ ಸಿಬ್ಬಂದಿ ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಅಕ್ಟೋಬರ್ 12 ರಂದೇ ತಮ್ಮಣ್ಣ ಕಾಲೋನಿಯ ಪ್ರೇಮ್ ಕುಮಾರ್ ಗಾಂಧಿ (19) ಎಂಬಾತನನ್ನು ಬಂಧಿಸಿದ್ದಾರೆ. 

ಬಂಧಿತ ಆರೋಪಿಯಿಂದ ಸುಮಾರು 6,20,000 ರೂ. ಮೌಲ್ಯದ 44 ಗ್ರಾಂ 300 ಮಿಲಿ ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor