ಭದ್ರಾವತಿ: ಗಣಪತಿ ವಿಸರ್ಜನೆ ವೇಳೆ ದುರಂತ, ಕೆರೆಯಲ್ಲಿ ಮುಳುಗಿ ಯುವಕ ಸಾವು!

ಹಂಚಿಕೊಳ್ಳಿ
WhatsApp Facebook X Telegram
ಗಣೇಶ ವಿಸರ್ಜನೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು, ಮಲೆನಾಡು ಟುಡೆ ಸುದ್ದಿ,
ಗಣೇಶ ವಿಸರ್ಜನೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು, ಮಲೆನಾಡು ಟುಡೆ ಸುದ್ದಿ,

ಮಲೆನಾಡು ಟುಡೆ ಸುದ್ದಿ/ ಭದ್ರಾವತಿ : ಭದ್ರಾವತಿ ತಾಲೂಕಿನ ದೇವರಹಳ್ಳಿ ಸಮೀಪ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ರಂಗನಾಥಪುರ ನಿವಾಸಿ, 20 ವರ್ಷದ ರಾಕೇಶ್ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಯಲ್ಲಿ ರಾಕೇಶ್​​ ಭಾಗವಹಿಸಿದ್ದನು, ಭಾನುವಾರ ಸಾಯಂಕಾಲ ರಂಗನಾಥಪುರದಿಂದ ಆರಂಭಗೊಂಡ ಗಣಪತಿ ವಿಸರ್ಜನಾ ಮೆರವಣಿಗೆಯು ರಾತ್ರಿ ಸುಮಾರು 1 ಗಂಟೆಯ ವೇಳೆಗೆ ದೇವರಹಳ್ಳಿ ಕೆರೆಯ ಬಳಿ ತಲುಪಿತ್ತು. 

ಗಣೇಶ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ರಾಕೇಶ್ ಆಕಸ್ಮಿಕವಾಗಿ ಕಾಲ ಜಾರಿ ನೀರಿಗೆ ಬಿದ್ದು ಮುಳುಗಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದರು.

ಸತತ ಕಾರ್ಯಾಚರಣೆಯ ನಂತರ, ಸೋಮವಾರ ಬೆಳಗಿನ ಜಾವ ರಾಕೇಶ್ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor