ಬಂಧನದಿಂದ ಬಚಾವ್ ಆದ ಭಗವಾನ್​/ ಸಾಗರ ತಾಲ್ಲೂಕಿನಲ್ಲಿ ಏನಿದು ಕೇಸ್​

ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್​ರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. 10 ದಿನಗಳ ಒಳಗಾಗಿ ಪೋಲಿಸ್ ಮುಂದೆ ಹಾಜರಾಗುವಂತೆ, ₹100000/ ವೈಯಕ್ತಿಕ ಬಾಂಡ್ ನೀಡುವಂತೆ ಸೂಚಿಸಿದೆ.

ಬಂಧನದಿಂದ ಬಚಾವ್ ಆದ ಭಗವಾನ್​/ ಸಾಗರ ತಾಲ್ಲೂಕಿನಲ್ಲಿ ಏನಿದು ಕೇಸ್​

ರಾಮ ಮಂದಿರ ಏಕೆ ಬೇಡ? ಕೃತಿ ವಿವಾದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ  ನ್ಯಾಯಾಲಯ ಸಾಗರದಿಂದ ವಿವಾದಾತ್ಮಕ ಸಾಹಿತಿ ಭಗವಾನ್ ಗೆ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಭಗವಾನ್ ವಿರುದ್ದ ಸಾಗರ ಜೆ ಎಂ ಎಪ್ ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ರಾಮ ಮಂದಿರದ ಕುರಿತಾದ ಕೃತಿ ಬರೆದಿದ್ದ ಮೈಸೂರಿನ ಸಾಹಿತಿ ಭಗವಾನ್ ವಿರುದ್ದ ಇಕ್ಕೇರಿಯ ಮಹಾಬಲೇಶ್ವರ ಎಂಬ ಸಂಘ ಪರಿವಾರದ ಕಾರ್ಯಕರ್ತರು,  ಸಾಗರ JMFC ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಿಸಿದ್ದರು.

ಇದನ್ನು ಸಹ ಓದಿ : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಚಂದ್ರುರವರ ಹೇಳಿಕೆ

ಇದರ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಭಗವಾನ್ ವಿರುದ್ದ IPC ಸೆಕ್ಷನ್ 295(a) ರಡಿಯಲ್ಲಿ ಧಾರ್ಮಿಕ ಭಾವನೆಗೆ ದಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿಕೊಂಡಿತ್ತು. ಅಲ್ಲದೆ, ದಿನಾಂಕ 2/11/22  ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೈಸೂರ್ SP ಮೂಲಕ ಸಮನ್ಸ್ ಜಾರಿಮಾಡಿತ್ತು.ಆದರೆ ಸಮನ್ಸ್ ಖುದ್ದು ಜಾರಿಯಾಗಿದ್ದರೂ ಭಗವಾನ್ ಆ ದಿನ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದರಿಂದ JMFC ನ್ಯಾಯಾಲಯ ಜಾಮೀನು ರಹಿತ ಬಂದನ ವಾರೆಂಟ್  ಆದೇಶ ಮಾಡಿದ್ದು ಪೇಟೆ ಪೋಲಿಸ್ ಠಾಣೆ ಸಾಗರ ಜಾರಿ ಮಾಡುವಂತೆ ನ್ಯಾಯಾಲಯ ಆದೇಶ ಮಾಡಿತ್ತು.

ಇದನ್ನು ಸಹ ಓದಿ : ಸಾಗರ ಪೇಟೆ ಸ್ಟೇಷನ್​ನಲ್ಲಿ ನಡೀತು ಈ ವಿಶೇಷ ಕಾರ್ಯಕ್ರಮ

ಈ ನಡುವೆ ಭಗವಾನ್ ನಿರೀಕ್ಷಣಾ ಜಾಮೀನು ಕೋರಿ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಾಗರದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್​ರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. 10 ದಿನಗಳ ಒಳಗಾಗಿ ಪೋಲಿಸ್ ಮುಂದೆ ಹಾಜರಾಗುವಂತೆ, ₹100000/ ವೈಯಕ್ತಿಕ ಬಾಂಡ್ ನೀಡುವಂತೆ ಸೂಚಿಸಿದೆ.  

ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಇದನ್ನು ಸಹ ಕ್ಲಿಕ್ ಮಾಡಿ : ಜಿ20 ಸಭೆಗಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟ ಸಕ್ರೆಬೈಲ್​ನ ಜೋಡಿ ಆನೆಗಳು | ಏನಿದು ವಿಶೇಷ ಗೊತ್ತಾ | Exclusive

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ವಾಟ್ಸ್ಯಾಪ್​ ಗ್ರೂಪ್​ನ ಲಿಂಕ್​ಗೆ ಕ್ಲಿಕ್ ಮಾಡಿ :  Whatsapp link