SHIVAMOGGA | MALENADUTODAY NEWS | ಮಲೆನಾಡು ಟುಡೆ Nov 13, 2024
ಮತ್ತೆ ಮಳೆಯಾಗುವ ಮನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಇನ್ನೂ ಐದು ದಿನಗಳ ಕಾಲ ಮಳೆಯಾಗಲಿದೆ ಎನ್ನಲಾಗಿದೆ. ವಿವರವನ್ನು ಗಮನಿಸುವುದಾದರೆ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದ ಆಯ್ದ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮಾಹಿತಿ ನೀಡಿದೆ.
ಕಾವೇರಿ ಹಾಗೂ ಕೃಷ್ಣ ಜಲಾನಯನ ಪ್ರದೇಶಗಳಲ್ಲಿ ಸಾಧಾರಣ ಮಳೆಯ ಮನ್ಸೂಚನೆ ನೀಡಿರುವ ಹವಾಮಾನ ಇಲಾಖೆ
ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದ ಎಚ್ಚರಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ,ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ , ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
SUMMARY | According to the Met department, there will be rain for another five days. Shivamogga, Chikkamagaluru, Kodagu and Mysuru districts are likely to receive thundershowers for the next five days.
KEYWORDS | indian Met department, rain for another five days, Shivamogga, Chikkamagaluru, Kodagu ,Mysuru districts, receive thundershowers for the next five days,