SHIVAMOGGA | MALENADUTODAY NEWS | ಮಲೆನಾಡು ಟುಡೆ Nov 7, 2024
ಶಿವಮೊಗ್ಗ | 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಗ್ರಾಮ ಲೆಕ್ಕಾಧಿಕಾರಿಯನ್ನ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಸಂಜಯ್ ಮೋಹಿತೆ ಎಂಬವರು ಬಂಧಿತರು. ಇವರು ಭೂಪರಿವರ್ತನೆ ದಾಖಲೆ ಪ್ರಕ್ರಿಯೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.
ಶಿವಮೊಗ್ಗ ತಾಲೂಕಿನ ಅಗಸವಳ್ಳಿ ಹೊಸೂರು ಗ್ರಾಮದ ನಿವಾಸಿ ಮುನಿರಂಗೇಗೌಡ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಸಂಜಯ್ ರವರು ತನ್ನ ಅಜ್ಜನ ಎರಡು ಎಕರೆ ಭೂಮಿಯನ್ನು ಅಜ್ಜಿಗೆ ಹಸ್ತಾಂತರಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಈ ಸಂಬಂಧ 25 ಸಾವಿರ ಲಂಚ ಪಡೆಯುತ್ತಿದ್ದ ವೇಳೇಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ. ಆ ಬಳಿಕ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
SUMMARY | Shimoga | The Lokayukta police arrested a village accountant red-handed for allegedly accepting a bribe of Rs 25,000.
KEYWORDS | Shimoga ,The Lokayukta police, village accountant, red-handed, accepting a bribe ,