Bike accident in thirthahalli : ಕಾರು ಹಾಗೂ ಬೈಕ್ ನಡುವೆ ಅಪಘಾತ : ಸವಾರನಿಗೆ ಗಂಭೀರ ಗಾಯ
ತೀರ್ಥಹಳ್ಳಿ ಕೊಪ್ಪ ರಸ್ತೆಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಗಂಭಿರ ಗಾಯಗಳಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಬೈಕ್ ಸವಾರ ಮದನ್ರವರಿಗೆ ಗಂಭೀರ ಗಾಯಗಳಾಗಿದೆ. ಇದರಿಂದಾಗಿ ಅವರನ್ನನು ತಕ್ಷಣವೇ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.