SHIVAMOGGA | Jan 4, 2024 | ಶಿವಮೊಗ್ಗ ನಗರದ ಗಾಡಿಕೊಪ್ಪದದಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮತ್ತೊಂದು ಅಪಘಾತ ಸಂಭವಿಸಿದ್ದು, ಅದರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವೇಗವಾಗಿ ಆಗಮಿಸಿದ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲೆಗೆ ತೆರಳುತ್ತಿದ್ದ ಬಾಲಕಿ ಹಾಗೂ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಓರ್ವರಿಗೆ ಗಂಭೀರ ಗಾಯವಾಗಿದೆ.
ಘಟನೆ ಬೆನ್ನಲ್ಲೆ ಸ್ಥಳೀಯ ನಿವಾಸಿಗಳು ಗಾಯಗೊಂಡ ಮೂವರನ್ನು ಮೂವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿದ್ದಾರೆ.
ಇನ್ನೂ ಈ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಾಲೆಗೆ ಆಗಮಿಸಲು ರಸ್ತೆ ದಾಟುತ್ತಿದ್ದ ಬಾಲಕಿಗೆ ಡಿಕ್ಕಿ ಹೊಡೆದ ನಂತರ ಬೈಕ್ ಇನ್ನೊಬ್ಬ ವ್ಯಕ್ತಿಗೆ ಡಿಕ್ಕಿಯಾಗಿದೆ. ಅತಿವೇಗದ ಚಾಲನೆಯೇ ಅವಘಡಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
