ಶಿವಮೊಗ್ಗ: ಪ್ರಧಾನಿ ಮೋದಿ ಆಡಳಿತಕ್ಕೆ 12 ರ ಸಂಭ್ರಮ, ಸಂಸದ ರಾಘವೇಂದ್ರ ನೇತೃತ್ವದಲ್ಲಿ ವಿಶೇಷ ಪೂಜೆ, ಸಿಹಿ ಹಂಚಿಕೆ

ಹಂಚಿಕೊಳ್ಳಿ
WhatsApp Facebook X Telegram
BJP Celebrates PM Modi's 12 Years In Office
BJP Celebrates PM Modi's 12 Years In Office

ಶಿವಮೊಗ್ಗ: ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾಗಿ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ  ಹಿನ್ನೆಲೆಯಲ್ಲಿ, ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಶಿವಮೊಗ್ಗ : ಮರದ ಕೊಂಬೆಗಳನ್ನು ಕತ್ತರಿಸುವ ವೇಳೆ ವಿದ್ಯುತ್​ ಸ್ಪರ್ಶಿಸಿ ಕ್ರಿಕೆಟ್ ​ ಆಟಗಾರ ಸಾವು

ಶಿವಮೊಗ್ಗದ ವಿನೋಬನಗರದಲ್ಲಿರುವ  ಅಭಿಷ್ಟವರ ಶ್ರೀ ಗಣಪತಿ ದೇವಸ್ಥಾನದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ಸಲ್ಲಿಸಲಾಯಿತು. ದೇಶವನ್ನು ಜಾಗತಿಕ ಮಟ್ಟದಲ್ಲಿ ಮುನ್ನಡೆಸುತ್ತಿರುವಪ್ರಧಾನಿಗೆ ಇನ್ನಷ್ಟು ಕಾಲ ದೇಶದ ಸೇವೆ ಮಾಡಲು ಮತ್ತು ಭಾರತವನ್ನು ಸರ್ವತೋಮುಖ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ವಿಘ್ನನಿವಾರಕ ಶ್ರೀ ಗಣೇಶನು ಶಕ್ತಿ, ಆಯುಷ್ಯ, ಆರೋಗ್ಯ ನೀಡಲಿ ಪ್ರಾರ್ಥಿಸಲಾಯಿತು.

ಈ ವೇಳೆ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

BJP Celebrates PM Modi’s 12 Years In Office

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor