Kuvempu University / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳು, ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ಅವ್ಯವಸ್ಥೆಗಳ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದೆ.
ಈ ಸಂಬಂಧ ಅವ್ಯವಸ್ಥೆಳಿಗೆ ಪ್ರತಿಯಾಗಿ ಒಂದು ತಿಂಗಳೊಳಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಕುಲಪತಿಗಳನ್ನು ವಜಾಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಈ ಬೇಡಿಕೆಗಳನ್ನು ಮಂದಿಟ್ಟು ನಿನ್ನೆ ದಿನ ಸೋಮವಾರ ಕುವೆಂಪು ವಿವಿ ಕುಲಸಚಿವರಾಗಿರುವ ಜಿಪಂ ಸಿಇಒ ಎನ್.ಹೇಮಂತ್ರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
- ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು. ಅಂಕಪಟ್ಟಿ ವಿತರಣೆಯಲ್ಲಿನ ವಿಳಂಬವನ್ನು ತಕ್ಷಣ ಸರಿಪಡಿಸಬೇಕು.
- ಪಧವಿ ಪ್ರದಾನ ಶುಲ್ಕವನ್ನು ಕಡಿಮೆ ಮಾಡಬೇಕು. ಎಲ್ ಎಂಎಸ್ ಸೇರಿದಂತೆ ವಿವಿಧ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದನ್ನು ರದ್ದುಪಡಿಸಬೇಕು.
- ಹಾಸ್ಟೆಲ್, ಗ್ರಂಥಾಲಯ ಹಾಗೂ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು.
- ಗುತ್ತಿಗೆ ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ನೇಮಕಾತಿ, ಟೆಂಡರ್, ಖರೀದಿ ಹಾಗೂ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು.
- ವಿದ್ಯಾರ್ಥಿಗಳ ಹಿತಾಸಕ್ತಿಗೆ ವಿರುದ್ಧವಾಗಿರುವ ಎಲ್ಲಾ ನಿರ್ಧಾರಗಳನ್ನು ಹಿಂಪಡೆಯಬೇಕು. ಆಡಳಿತ ವೈಫಲ್ಯಕ್ಕೆ ಹೊಣೆ ಹೊತ್ತು ಕುಲಪತಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ರಾಮಣ್ಣ ಅರುಣ್ ಕುಗ್ವೆ ಹಾಗೂ ದರ್ಶನ್, ರಾಹುಲ್ ಬಿದರೆ, ಅನಿಲ್ ಲಕ್ಕಿನಕೊಪ್ಪ, ಪ್ರಜ್ವಲ್, ಕಿರಣ್ ಪಟೇಲ್, ಸಂಜಯ್ ಹಾಗೂ ಯಶಸ್ವಿ, ಹರೀಶ್ ನಾಯ್ ಹಾಗೂ ಯುವರಾಜ್, ವಿವೇಕ್ ಹೆಬ್ಬಾರ್, ಚಂದ್ರಶೇಖರ್, ಅಭಿಷೇಕ್ ಹಾಗೂ ಶಶಿಕುಮಾರ್, ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ಮತ್ತು ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಢಿದ್ದರು.
