ಶಿಕಾರಿಪುರ : ತಂದೆಯ ಹೆಸರಲ್ಲಿ ಲಂಚ ಪಡೆದಿದ್ದ ಬಿವೈ ವಿಜಯೇಂದ್ರ ಭ್ರಷ್ಟಾಚಾರದಲ್ಲಿ ದೇಶಕ್ಕೆ ಮಾದರಿ: ಬಿಕೆ ಹರಿಪ್ರಸಾದ್​

ಹಂಚಿಕೊಳ್ಳಿ
WhatsApp Facebook X Telegram
ಬಿವೈ ವಿಜಯೇಂದ್ರರ ವಿರುದ್ದ ಬಿಕೆ ಹರಿಪ್ರಸಾದ್_ ವಾಗ್ದಾಳಿ
ಬಿವೈ ವಿಜಯೇಂದ್ರರ ವಿರುದ್ದ ಬಿಕೆ ಹರಿಪ್ರಸಾದ್_ ವಾಗ್ದಾಳಿ

ಮಲೆನಾಡು ಟುಡೇ ಸುದ್ದಿ / : ತಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿನಲ್ಲಿ 17 ಕೋಟಿ ರೂಪಾಯಿ ಆರ್‌ಟಿಜಿಎಸ್ ಮಾಡಿಸಿಕೊಂಡು ಯಾರಾದರೂ ಲಂಚ ಪಡೆದಿದ್ದರೆ, ಅದು ಶಿಕಾರಿಪುರ ಕ್ಷೇತ್ರದ ಶಾಸಕ ಬಿ. ವೈ. ವಿಜಯೇಂದ್ರ ಎಂದು ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ, ಹುತಾತ್ಮರಿಗೆ ನಮನ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಬಿಜೆಪಿಯವರು ಲಿಂಗಸುಗೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿದರೂ, ಒಂದು ದಿನವೂ ನಾಡಿನ ಬರಗಾಲದ ವಿಚಾರವಾಗಿ ಮಾತನಾಡಲಿಲ್ಲ. ಆದರೆ, ಅದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಇಂದು ಭ್ರಷ್ಟಾಚಾರದ ಕುರಿತು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನನ್ನ ಪ್ರಕಾರ ಭ್ರಷ್ಟಾಚಾರದಲ್ಲಿ ಇಡೀ ದೇಶಕ್ಕೇ ಮಾದರಿಯಾಗುವವರಿದ್ದರೆ, ಅದು ಶಿಕಾರಿಪುರದ ಶಾಸಕ ಬಿ. ವೈ. ವಿಜಯೇಂದ್ರ ಮಾತ್ರ. ತಂದೆಯ ಹೆಸರಿನಲ್ಲಿ ಆರ್‌ಟಿಜಿಎಸ್ ಮೂಲಕ 17 ಕೋಟಿ ರೂಪಾಯಿ ಲಂಚ ಪಡೆದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದು ಹರಿಪ್ರಸಾದ್ ಆರೋಪಿಸಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor