COURT LIVE

ಶಿವಮೊಗ್ಗ ಕೋರ್ಟ್​ಗೆ ಬಾಂಬ್​ ಬೆದರಿಕೆ !ನ್ಯಾಯಾಲಯದ ಆವರಣದಲ್ಲಿ ತಪಾಸಣೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Bomb Threat Email to Shivamogga Court / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಬೇರೆ ಜಿಲ್ಲೆಗಳಲ್ಲಿ ಕೇಳಿ ಬಂದಂತೆ, ಇವತ್ತು ಬುಧವಾರ, ಶಿವಮೊಗ್ಗ ಕೋರ್ಟ್​ಗೆ ಬಾಂಬ್ ಬೆದರಿಕೆ ಬಂದಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜಯನಗರ ಪೊಲೀಸ್ ಸ್ಟೇಷನ್ ಪೊಲೀಸರು ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಬೆದರಿಕೆ ಸಂದೇಶ ಇರುವ ಇಮೇಲ್​ ಒಂದು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (ಪಿಡಿಜೆ) ಅಧಿಕೃತ ಇಮೇಲ್ ವಿಳಾಸಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಹಿತಿಯ ಜಯನಗರ ಪೊಲೀಸ್ ಸ್ಟೇಷನ್​ಗೆ ರವಾನೆಯಾಗಿದ್ದು, ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ತಪಾಸಣೆ ನಡೆಸಲಾಗಿದೆ.

ಇನ್ನೂ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಸುತ್ತಮುತ್ತಲಿನ ಪ್ರದೇಶಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ತಪಾಸಣೆ ಕೈಗೊಳ್ಳಲಾಗಿತತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದೊಂದಿಗೆ ಪೊಲೀಸರು ನ್ಯಾಯಾಲಯದ ಕಟ್ಟಡ, ಆವರಣ ಹಾಗೂ ನಿಲ್ಲಿಸಿರುವ ವಾಹನಗಳ ಪ್ರತಿಯೊಂದು ಮೂಲೆಯನ್ನು ತಪಾಸಣೆ ನಡೆಸುತ್ತಿದ್ದಾರೆ.

ಪೊಲೀಸ್ ಕಾರ್ಯಾಚರಣೆಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ವಕೀಲರ ಸಂಘವು ತನ್ನೆಲ್ಲಾ ಸದಸ್ಯರಿಗೆ ತುರ್ತು ಸಂದೇಶ ರವಾನಿಸಿದೆ. ತಪಾಸಣಾ ಕಾರ್ಯವು ಪ್ರಗತಿಯಲ್ಲಿರುವ ಕಾರಣ, ವಾಹನಗಳ ತಪಾಸಣೆ ಸೇರಿದಂತೆ ಭದ್ರತಾ ಸಿಬ್ಬಂದಿಯ ಪ್ರತಿಯೊಂದು ಕಾರ್ಯಕ್ಕೂ ವಕೀಲರು ಸಂಪೂರ್ಣ ಸಹಕಾರ ನೀಡಬೇಕು ಎಂದು ಸಂಘ ಮನವಿಮಾಡಿತ್ತು.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ