ಮಲವಗೊಪ್ಪ ಸಮೀಪ ಭದ್ರಾವತಿ ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ! ಶಾಲೆಗೆ ಹೋಗುತ್ತಿದ್ದ ಬಾಲಕ ಸಾವು!

The boy, who was on his way to school, was hit by a bike coming from Bhadravathi side near Malavagoppa. Death!

ಮಲವಗೊಪ್ಪ ಸಮೀಪ ಭದ್ರಾವತಿ ಕಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿ! ಶಾಲೆಗೆ ಹೋಗುತ್ತಿದ್ದ ಬಾಲಕ ಸಾವು!
The boy, who was on his way to school, was hit by a bike coming from Bhadravathi side near Malavagoppa. Death!

SHIVAMOGGA  |  Jan 25, 2024  |   ಶಿವಮೊಗ್ಗ ನಗರದಲ್ಲಿ ಇವತ್ತೊಂದು ಅಪಘಾತ ಸಂಭವಿಸಿದ್ದು , ಬಾಲಕೊಬ್ಬ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಶಾಲೆಗೆ ಹೋಗುವ ಬಸ್​ ಹಿಡಿಯಲು ಅದರ ಸ್ಟಾಪ್ ಬಳಿ ಹೋಗುತ್ತಿದ್ದ ವೇಳೆ ಬೈಕ್​ವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಆತ ಸಾವನ್ನಪ್ಪಿದ್ದಾನೆ. 

ಶಿವಮೊಗ್ಗ ನಗರದ ಮಲವಗೊಪ್ಪದ ಸಮೀಪ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಭದ್ರಾವತಿಯ ಕಡೆಯಿಂದ ಬರುತ್ತಿದ್ದ ಬೈಕ್ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಕೆಳಕ್ಕೆ ಬಿದ್ದಿದ್ದಾನೆ. ತಕ್ಷಣವೆ ಆತನನ್ನು ಅಲ್ಲಿದ್ದವರು ಆಸ್ಪತ್ರೆಗೆ ರವಾನಿಸಲು ಮುಂದಾಗಿದ್ದಾರೆ. ಆದರೆ ಮಾರ್ಗಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.