ಶಿವಮೊಗ್ಗ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 138 ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಐಎಎಸ್, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಂಪರ್ ನೆರವು!

ಹಂಚಿಕೊಳ್ಳಿ
WhatsApp Facebook X Telegram
Karnataka Brahmin Development Board Pratibha Puraskar
Karnataka Brahmin Development Board Pratibha Puraskar

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ರಾಜ್ಯದಾದ್ಯಂತ 138 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ನ. 22ರಂದು ಬೆಂಗಳೂರಿನ ಆನಂದರಾವ್ ವೃತ್ತದ ಬಬೂರ್‌ಕಮ್ಮಿ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ಮಂಡಳಿಯ ನಿರ್ದೇಶಕ ಪಿ.ಎಂ. ಮಾಲತೇಶ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಂಡಳಿ ಈ ಕಾರ್ಯಕ್ರಮ ಆಯೋಜಿಸಿದೆ ಎಂದರು.

ಮಂಡಳಿಯಿಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಸಾಂದೀಪಿನಿ ಶಿಷ್ಯವೇತನ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳು ಸೌಲಭ್ಯ ಪಡೆಯಲು ಡಿ. 31 ಕೊನೆಯ ದಿನವಾಗಿದೆ. ಕಟ್ಟಕಡೆಯ ವಿದ್ಯಾರ್ಥಿಗೂ ವಿದ್ಯಾರ್ಥಿವೇತನ ತಲುಪಿಸುವುದು ಸರ್ಕಾರದ ಉದ್ದೇಶವಾಗಿದ್ದು, ಅರ್ಹರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಚಾಣಕ್ಯ ತರಬೇತಿ ಯೋಜನೆಯಡಿ ಐಎಎಸ್ ಮತ್ತು ಕೆಎಎಸ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ₹1 ಲಕ್ಷ ನೆರವು ನೀಡಲಾಗುತ್ತಿದೆ. ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶುಲ್ಕದ ಮೂರನೇ ಎರಡರಷ್ಟು ಮೊತ್ತವನ್ನು ಮರುಪಾವತಿಸಲಾಗುತ್ತಿದೆ. ಕಾಮೆಡ್‌ಕೆ ಮತ್ತು ಮ್ಯಾನೇಜ್‌ಮೆಂಟ್ ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಅನ್ವಯಿಸುವುದಿಲ್ಲ ಎಂದರು.

ವಿಪ್ರ ನೇರ ಸಾಲ ಯೋಜನೆಯಡಿ ಕಳೆದ ಒಂದು ವರ್ಷದಲ್ಲಿ 1,333 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 1,200 ಮಂದಿಗೆ ಸಾಲ ಸೌಲಭ್ಯ ಒದಗಿಸಲಾಗಿದೆ. ಉಳಿದ ಅರ್ಜಿದಾರರಿಗೂ ಸಾಲ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಯೋಜನೆಯಡಿ ₹2 ಲಕ್ಷ ಸಾಲದೊಂದಿಗೆ ₹40 ಸಾವಿರ ಸಹಾಯಧನ ನೀಡಲಾಗುತ್ತಿದ್ದು, ಉಳಿದ ₹1.60 ಲಕ್ಷಕ್ಕೆ ಶೇ 4ರ ಬಡ್ಡಿ ವಿಧಿಸಲಾಗುತ್ತದೆ ಎಂದು ಹೇಳಿದರು.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor