SHIVAMOGGA NEWS TODAY

ಆಟವಾಡುವ ವೇಳೆ ಕಾರಿನ ಗ್ಲಾಸ್ ಒಡೆದ ಮಕ್ಕಳು: 112 ಪೊಲೀಸರಿಗೆ ಫೋನ್ ಮಾಡಿದ ಮಾಲೀಕರು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಮನೆ ಹತ್ತಿರ ಆಟವಾಡುತ್ತಿದ್ದ ಮಕ್ಕಳು ಕಾರಿನ ಗ್ಲಾಸ್ ಒಡೆದಿದ್ದಾರೆ ಎಂದು ಆರೋಪಿಸಿ, ಕಾರಿನ ಮಾಲೀಕರು 112 ಪೊಲೀಸ್ ಸಿಬ್ಬಂದಿಗೆ ಫೋನ್ ಮಾಡಿ ದೂರು ನೀಡಿರುವ ಘಟನೆ ಜರುಗಿದೆ. 

ಶಿವಮೊಗ್ಗ : ಗಂಡು ಮಗುವಿನ ಭ್ರೂಣ ಪತ್ತೆ ! ಮಕ್ಕಳ ಸಹಾಯವಾಣಿ ಯೋಜನಾ ಸಂಯೋಜಕರಿಂದ ದೂರು

ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಮನೆಯ ಮುಂದೆ ಹುಡುಗರ ಗುಂಪೊಂದು ಆಟವಾಡುತ್ತಿತ್ತು ಎನ್ನಲಾಗಿದೆ. ಈ ವೇಳೆ ಆಟವಾಡಲು ಬಳಸುತ್ತಿದ್ದ ವಸ್ತು ತಗುಲಿಯೋ ಅಥವಾ ಇನ್ಯಾವುದೋ ಕಾರಣದಿಂದಾಗಿಯೋ ಕಾರಿನ ಗ್ಲಾಸ್ ಒಡೆದಿದೆ. ಈ ಹಿನ್ನೆಲೆಯಲ್ಲಿ ಕಾರಿನ ಮಾಲೀಕರು ತಕ್ಷಣವೇ 112 ಪೊಲೀಸ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. 

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರಾದರೂ, ಕಾರಿನ ಗ್ಲಾಸ್ ಒಡೆದಿದ್ದು ಯಾರು ಎಂಬುದು ತಕ್ಷಣಕ್ಕೆ ಪತ್ತೆಯಾಗಿಲ್ಲ. ಈ ಕಾರಣದಿಂದಾಗಿ, ಜಯನಗರ ಪೊಲೀಸ್ ಠಾಣೆಗೆ ಖುದ್ದಾಗಿ ಬಂದು ಅಧಿಕೃತ ದೂರನ್ನು ನೀಡುವಂತೆ ಸಿಬ್ಬಂದಿಗಳು ಕಾರಿನ ಮಾಲೀಕರಿಗೆ ಸೂಚಿಸಿದ್ದಾರೆ.

Break Car Glass While Playing Owner Calls Police

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.