KARNATAKA NEWS/ ONLINE / Malenadu today/ Aug 8, 2023 SHIVAMOGGA NEWS
ಶಿವಮೊಗ್ಗ ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಚಿರತೆಯೊಂದು ಮಹಿಳೆ ಮೇಲೆ ದಾಳಿ ಮಾಡಿದೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. 42 ವರ್ಷದ ಯಶೋದಮ್ಮ ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಕ್ಕೋನಹಳ್ಳಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮರವರ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ.
ಯಶೋದಮ್ಮರವರ ದೇಹದ ಭಾಗವೊಂದನ್ನ ಚಿರತೆ ತಿಂದಿದ್ದು, ಘಟನೆಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ಸ್ಥಳದಲ್ಲಿನ ಹೆಜ್ಜೆ ಗುರುತುಗಳನ್ನ ಗಮನಿಸಿ ಚಿರತೆ ದಾಳಿ ನಡೆಸಿರಬಹುದು ಎಂದು ಶಂಕಿಸಿದ್ದಾರೆ.
