ಸಂಪುಟ ವಿಸ್ತರಣೆಯ ಬಗ್ಗೆ ಬ್ರೇಕಿಂಗ್ ನ್ಯೂಸ್​ / ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮಹತ್ವದ ಹೇಳಿಕೆ

ಸಂಪುಟ ವಿಸ್ತರಣೆಯ ಬಗ್ಗೆ ಬ್ರೇಕಿಂಗ್ ನ್ಯೂಸ್​ / ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಮಹತ್ವದ ಹೇಳಿಕೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ‌ ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, (B. S. Yediyurappa) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 140 ರಿಂದ 150 ಸ್ಥಾನ ಗೆಲ್ಲುತ್ತೇವೆ ಎಂದಿದ್ದಾರೆ. 

ಅಲ್ಲದೆ, ನಾವು ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ, ಸೂರ್ಯ ಚಂದ್ರರಿರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ, ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ದೊಡ್ಡ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದಿದೆ ಎಂದರು

ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​? 

ಕಾಂಗ್ರೆಸ್​ನದ್ದು ತಿರುಕನ ಕನಸು

ಕಾಂಗ್ರೆಸ್ ನಲ್ಲಿ ಯಾರೋ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಅಂತ ಬಡಿದಾಡುತ್ತಿದ್ದಾರೆ, ಅದು ಕೇವಲ ತಿರುಕನ ಕನಸಾಗುತ್ತೆ. ಅದರ ಹೊರತು ಆ ಕನಸು ಯಾವುದೇ ಕಾರಣಕ್ಕೂ ಸಾಧ್ಯ ಇಲ್ಲ. ಇದು ಅವರಿಗೂ ಮನವರಿಕೆ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರಂತವರ ನಾಯಕತ್ವ ನಮಗಿರಬೇಕಾದರೇ ಈ ಚುನಾವಣೆಯಲ್ಲಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು. 

ಇದನ್ನು ಸಹ ಓದಿ ಶಿವಮೊಗ್ಗ ಕೋಮುಗಲಭೆಯ ಹಿಂದಿರೋ ತಂಡದ ಹೆಡೆಮುರಿ ಕಟ್ಟಿದ ಎಸ್​ಪಿಮಿಥುನ್​ ಕುಮಾರ್! ಏನಿದು ಕೇಸ್​? JP ಸ್ಟೋರಿ

ಸದ್ಯದಲ್ಲಿಯೇ ಸಂಪುಟ ವಿಸ್ತರಣೆ

ಎಲ್ಲಾ ಕಾರ್ಯಕರ್ತರು ಬೂತ್ ಬಲ ಪಡಿಸಿ ಮತದಾರರನ್ನು ಮನವೊಲಿಸಿ ಮತಗಟ್ಟೆಗೆ ಕರೆದುಕೊಂಡು ಬಂದು ಮತದಾನ ಮಾಡಿಸಬೇಕಿದೆ. ನಾವು ಈ ಭಾರೀ ಜಯಭೇರಿ ಬಾರಿಸಲಿದ್ದೇವೆ. ಹಾಗಾಗಿ ಎಲ್ಲರ ಸಹಕಾರ ಬೇಕು. ಎರಡ್ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.  ಎರಡು ಮೂರು ದಿನದಲ್ಲಿ ಈ ಸಂಬಂಧ ಕೇಂದ್ರದಲ್ಲಿ ತೀರ್ಮಾನ ತೆಗೆದುಕೊಳ್ಳುವುರಿದ್ದಾರೆ.ಯಾರನ್ನು ತೆಗೆದುಕೊಳ್ಳಬೇಕು ಎನ್ನುವುದು ಪ್ರಧಾನಿ ,ಕೇಂದ್ರದ ನಾಯಕರಿಗೆ ಬಿಟ್ಟಿದ್ದು ಎಂದರು. 

ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​?

ಸಿದ್ದರಾಮಯ್ಯ ನಿಂತ ನೆಲ ಕುಸಿಯುತ್ತಿದೆ.

ಸಿದ್ದರಾಮಯ್ಯ ನವರು ತಾವು ನಿಂತಿರುವ ನೆಲವೇ ಕುಸಿಯುತ್ತಿದೆ ಅನ್ನುವ ಅರಿವಿಲ್ಲದೇ  ಬಹಳ ಹಗುರವಾಗಿ ಮುಖ್ಯಮಂತ್ರಿ ಗಳ ಬಗ್ಗೆ ಆರ್ಎಸ್ಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಇದು ಹವ್ಯಾಸ ಆಗಿದೆ. ಇದಕ್ಕೆ ತಕ್ಕಪಾಠವನ್ನು ರಾಜ್ಯದ ಜನ ಕಲಿಸುತ್ತಾರೆ ಎಂದರು.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com