BREAKING NEWS ಶಿವಮೊಗ್ಗದಲ್ಲಿ ಕಂದಾಯ ಸಚಿವ ಆರ್.ಅಶೋಕ್​ ಗ್ರಾಮ ವಾಸ್ತವ್ಯ !? ಯಾವ ಹಳ್ಳಿ? ಇಲ್ಲಿದೆ ವಿವರ

Revenue Minister R Ashoka grama vastavya in Shivamogga Which village ? Here's the details

BREAKING NEWS ಶಿವಮೊಗ್ಗದಲ್ಲಿ ಕಂದಾಯ ಸಚಿವ  ಆರ್.ಅಶೋಕ್​ ಗ್ರಾಮ ವಾಸ್ತವ್ಯ !?  ಯಾವ ಹಳ್ಳಿ? ಇಲ್ಲಿದೆ ವಿವರ

 ಜ.28 ರಂದು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಗ್ರಾಮ ವಾಸ್ತವ್ಯ ಮಾಡಲಿದ್ದು, ಸಂಬಂಧಿಸಿದ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ.ನಾಗರಾಜ್ ಸೂಚನೆ ನೀಡಿದರು.  ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಪೂರ್ವಭಾವಿಯಾಗಿ ಚರ್ಚಿಸಲು ಇಂದು ತಾಲ್ಲೂಕು ಕಚೇರಿಯಲ್ಲಿ ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಸಾಗರ ಟೌನ್​ನಲ್ಲಿ ಹಲ್ಲೆಗೆ ಯತ್ನ ಕೇಸ್​/ ಆರೋಪಿಗಳ ಬಂಧನ/ ಶಾಸಕ ಹರತಾಳು ಹಾಲಪ್ಪ ಹೇಳಿದ್ದೇನು? ಇಲ್ಲಿದೆ ವಿಡಿಯೋ ವರದಿ

ಜ.28 ರಂದು ತಾಲ್ಲೂಕಿನ ಹೊಳಲೂರು ಗ್ರಾಮದ ಮಾರುತಿ ಪ್ರೌಢಶಾಲೆಯ ಆವರಣದಲ್ಲಿ ಬೆಳಿಗ್ಗೆ 11 ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭವಾಗಲಿದೆ. ತಾಲ್ಲೂಕು ಕಚೇರಿ ವ್ಯಾಪ್ತಿಯ 41 ಇಲಾಖೆಗಳಿಗೆ ಈಗಾಗಲೇ ಸಿದ್ದತೆ ಕುರಿತು ಮಾಹಿತಿ ನೀಡಲಾಗಿದ್ದು, ಅವಶ್ಯಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರಿಗೆ ಸೂಕ್ತ ಆಸನ ವ್ಯವಸ್ಥೆ ಮಾಡಿ, ಆದೇಶಗಳ ಸುಗಮ ವಿತರಣೆಗೆ ಸೂಕ್ತ ಸಿದ್ದತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಶ್ರೀರಾಮುಲು ಕನಸು ಶಿವಮೊಗ್ಗದಲ್ಲಿ ನನಸ್ಸಾಯ್ತು! ಬಳ್ಳಾರಿಗೆ ಹೊರಟ 23 ಅಡಿ ಎತ್ತರದ ಪುನೀತ್ ಪ್ರತಿಮೆಯ ವಿಶೇಷತೆ ಗೊತ್ತಾ

ದಿನಾಂಕ: 11-01-2023 ರಂದು ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಎಲ್ಲ ಇಲಾಖೆಗಳು, ನಿಗಮಗಳು ತಮ್ಮ ತಮ್ಮ ವ್ಯಾಪ್ತಿಯ ಫಲಾನುಭವಿಗಳ ಪಟ್ಟಿ ತಯಾರಿಸಿ, ಕಾರ್ಯಕ್ರಮದ ಸಮರ್ಪಕ ಆಯೋಜನೆಗೆ ಸೂಕ್ತ ವ್ಯವಸ್ಥೆ ಮತ್ತು ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಹಾಗೂ ಅಂದು ಇಲಾಖೆಗಳಿಂದ ಲಭ್ಯವಾಗುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿತೆ ಒದಗಿಸುವ ವಿವಿಧ 14 ಮಳಿಗೆಗಳನ್ನು ತೆರೆಯಲು ಸೂಚನೆ ನೀಡಿರುವನ್ವಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಆರಕ್ಷಕ ಇಲಾಖೆಯವರು ಪೂರ್ವಭಾವಿಯಾಗಿ ಸ್ಥಳ ಪರಿಶೀಲನೆ ನಡೆಸಿ, ವಾಹನಗಳ ಪಾರ್ಕಿಂಗ್, ಸುಗಮ ಸಂಚಾರ ಹಾಗೂ ಇತರೆ ಸುರಕ್ಷತಾ ವ್ಯವಸ್ಥೆಯ ಅಚ್ಚುಕಟ್ಟು ನಿರ್ವಹಣೆ ಕುರಿತು ಕ್ರಮ ಕೈಗೊಳ್ಳಬೇಕೆಂದರು. ಸಭೆಯಲ್ಲಿ ಡಿವೈಎಸ್‍ಪಿ ಸುರೇಶ್, ಉಪ ತಹಶೀಲ್ದಾರ್ ಗಣೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com