BREAKING NEWS/ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಎಸ್​ಪಿ ನೇತೃತ್ವದಲ್ಲಿ ರೇಡ್

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Apr 24, 2023 GOOGLE NEWS


ಶಿವಮೊಗ್ಗ/   ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸ್​ ಇಲಾಖೆ ರೇಡ್​ ನಡೆಸಿದೆ. 

ಶಿವಮೊಗ್ಗ ಎಸ್​ಪಿ ಮಿಥುನ್​ ಕುಮಾರ್ ನೇತೃತ್ವದಲ್ಲಿ ಅನಿಲ್ ಕುಮಾರ್ ಭೂಮ ರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಬಾಲರಾಜ್, ಡಿವೈಎಸ್.ಪಿ, ಶಿವಮೊಗ್ಗ –ಎ ಉಪವಿಭಾಗ,ಮಂಜುನಾಥ್, ಪೊಲೀಸ್ ನಿರೀಕ್ಷಕರು, ತುಂಗಾನಗರ ಪೊಲೀಸ್ ಠಾಣೆ, ಅಂಜನ್ ಕುಮಾರ್,

ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ, ಗಜೇಂದ್ರಪ್ಪ, ಪೊಲೀಸ್ ನಿರೀಕ್ಷಕರು, ಜಯನಗರ ಪೊಲೀಸ್ ಠಾಣೆ, ಜಯಶ್ರೀ ಮಾನೆ, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ ಮತ್ತು ಸಂಜೀವ್‌ ಮಹಾಜನ್, ಪೊಲೀಸ್ ನಿರೀಕ್ಷಕರು ವಿನೋಬನಗರ ಪೊಲೀಸ್ ಠಾಣೆ,

ಹಾಗೂ 05 ಜನ ಪಿಎಸ್ಐ ಮತ್ತು 50 ಜನ ಪೊಲೀಸ್ ಸಿಬ್ಬಂಧಿಗಳ ತಂಡವು ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ

 

ಒಂದು ಗಂಟೆಗೂ ಅಧಿಕ ಕಾಲ, ಕೈದಿಗಳ ಸೆಲ್​ಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಮೂಲಗಳ ಪ್ರಕಾರ, ಯಾವುದೇ ಕಾನೂನು ಬಾಹಿರ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ. 

 

ಇನ್ನೂ ಚುನಾವಣೆ ಹಿನ್ನೆಲೆಯಲ್ಲಿ ಎಸ್​ಪಿ ಮಿಥುನ್ ಕುಮಾರ್ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂಬ ಮಾಹಿತಿಯಿದೆ. 

Malenadutoday.com Social media

 

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor