BREAKING NEWS : ನಾಳೆ ನಾಡಿದ್ದು ಶಿವಮೊಗ್ಗ ನಗರದ ಬಹುಪಾಲು ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ ಓದಿ

BREAKING NEWS: There will be no electricity in most areas of Shivamogga city tomorrow. Read the details here.

BREAKING NEWS :  ನಾಳೆ ನಾಡಿದ್ದು ಶಿವಮೊಗ್ಗ ನಗರದ ಬಹುಪಾಲು ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ ಓದಿ

ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಶಿವಮೊಗ್ಗ, ನಗರ ಉಪವಿಭಾಗ-2ರ ಘಟಕ 5 ಮತ್ತು 6ರಲ್ಲಿ  ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವ ಕಾರಣ  ಮಾರ್ಚ್ 04 ರಂದು  ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ

ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‍ಬಿ ಕಾಲೋನಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ತುಂಗಾನಗರ ಚಾನಲೆ, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದರಾವ್ ಬಡಾವಣೆ, ಇಲಿಯಾಜ್ ನಗರ 1 ರಿಂದ 14ನೇ ಕ್ರಾಸ್, ಮಂಡ್ಲಿ ಕೆ.ಇ.ಬಿ. ವಸತಿಗೃಹಗಳು, ಶಂಕರ ರೈಸ್ ಮಿಲ್, 100 ಅಡಿ ರಸ್ತೆ, ಇಲಿಯಾಜ್ ನಗರ ಮಂಡಕ್ಕಿಭಟ್ಟಿ, ಕಲ್ಲೂರು ಗ್ರಾಮಾಂತರ ಪ್ರರ್ದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ಟಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶಗಳ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್

ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಶಿವಮೊಗ್ಗ : ಆಲ್ಕೊಳ ವಿ ವಿ ಕೇಂದ್ರದ ವ್ಯಾಪ್ತಿಯ ಎಂಎಫ್-5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ  ಮಾರ್ಚ್ 03 ರಂದು  ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿನೋಬನಗರ ಶಿವಾಲಯ ಹತ್ತಿರ ಮತ್ತು ಹಿಂಭಾಗ, ಮೇದಾರಕೇರಿ ವೃತ್ತ, 60 ಅಡಿರಸ್ತೆ, ಭಾಗ್ಯಾರಾಮ್ ಆಸ್ಪತ್ರೆ, ಶುಭಮಂಗಳಾ ಮುಂಭಾಗ, ಸಾಯಿಬಾಬಾ ದೇವಸ್ಥಾನ, ಲಕ್ಷ್ಮೀ ಚಿತ್ರಮಂದಿರ ಮುಂಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಶಿವಮೊಗ್ಗ:  ಆಲ್ಕೊಳ ವಿ ವಿ ಕೇಂದ್ರದ ವ್ಯಾಪ್ತಿಯ ಎಂಎಫ್-5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ  ಮಾರ್ಚ್ 03 ರಂದು  ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗೋಪಾಳ ಇ ಬ್ಲಾಕ್, ಕೆ.ಹೆಚ್.ಬಿ., ಎಲ್.ಐ.ಜಿ., ಎಂಐಜಿ., ಅಲ್‍ಹರೀಮ್ ಲೇಔಟ್, ಡಿ.ವಿ.ಜಿ. ವೃತ್ತ, ಪ್ರೆಸ್ ಕಾಲೋನಿ  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಗ್ರಾಮಗಳ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಶಿವಮೊಗ್ಗ, ಮಾರ್ಚ್ 02 : ಮಾಚೇನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯ ಎಂಸಿಎಫ್-1 ಮತ್ತು 18 ರ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ  ಮಾರ್ಚ್ 03, 06 ಮತ್ತು 09 ರಂದು  ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬಸವಾಪುರ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೆಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ  ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಗ್ರಾಮಗಳ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಪ್ರಾದೇಶಿಕ ಜಾನಪದ ಸಮ್ಮೇಳನ

ಶಿವಮೊಗ್ಗ,:   ಕುವೆಂಪು ವಿಶ್ವವಿದ್ಯಾಲಯ ಕನ್ನಡ ವಿಭಾಗ, ಸಹ್ಯಾದ್ರಿ ವಿಜ್ಞಾನ ಕಾಲೇಜು ಶಿವಮೊಗ್ಗ ಹಾಗೂ ದಕ್ಷಿಣ ಭಾರತೀಯ ಭಾಷೆಗಳ ಜಾನಪದ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ  ಮಾ. 04 ರಂದು  ಬೆಳಗ್ಗೆ 10.00ಕ್ಕೆ  ಪ್ರಾದೇಶಿಕ ಜಾನಪದ ಸಮ್ಮೇಳನ ಕಾರ್ಯಕ್ರಮವನ್ನು  ಏರ್ಪಡಿಸಲಾಗಿದೆ.    ಕಾರ್ಯಕ್ರಮದ ಉದ್ಘಾಟನೆಯನ್ನು ಶಿಗ್ಗಾವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ.ಭಾಸ್ಕರ್‍ರವರು ನೆರವೇರಿಸುವರು.   ಶಂಕರಘಟ್ಟ  ಕುವೆಂಪು ವಿಶ್ವವಿದ್ಯಾಲಯ ಕುಲಪತಿಗಳಾದ ಪ್ರೊ. ಬಿ.ಪಿ.ವೀರಭದ್ರಪ್ಪ ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ ಶಿಗ್ಗಾವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸಿ.ಟಿ.ಗುರುಪ್ರಸಾದ್, ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ, ಪ್ರಾಧ್ಯಾಪಕರು ಹಾಗೂ  ನಿರ್ದೇಶಕ ಪ್ರೊ. ಶಿವಾನಂದ ಕೆಳಗಿನಮನಿ, ಕರ್ನಾಟಕ ವಿಶ್ವವಿದ್ಯಾಲಯದ ಜಾನಪದ ವಿಭಾಗದ ಮುಖ್ಯಸ್ಥರು ಹಾಗೂ ಫಾಸಿಲ್ಸ್ ಪ್ರಾದೇಶಿಕ ಕಾರ್ಯದರ್ಶಿ ಪ್ರೊ. ವ್ಹಿ.ಎಲ್.ಪಾಟೀಲ್  ಆಗಮಿಸುವರು. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಎನ್.ರಾಜೇಶ್ವರಿ, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ. ಹೆಚ್.ಎನ್.ರಮೇಶ್ ಬಾಬು ಇವರುಗಳು ಉಪಸ್ಥಿತರಿರುವರು. ಅಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಎನ್. ರಾಜೇಶ್ವರಿ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಕೆ.ಸಿ. ಚಿತ್ರಲಿಂಗಯ್ಯ, ಆರ್.ಎಂ. ಸಣ್ಣಬೋರಯ್ಯ, ಚಳ್ಳೆಕೆರೆ ತಂಡದಿಂದ ಜನಪದ ಕಲಾ ಪ್ರದರ್ಶನ ಆಯೋಜಿಸಲಾಗಿದೆ. 

READ | Shivamogga Crime News | ಹೋರಿ ಹಬ್ಬದ ವಿಚಾರಕ್ಕೆ ಪರ ಊರಿನಲ್ಲಿ ಜಗಳ, ಸ್ವಂತಊರಿನಲ್ಲಿ ಹೊಡೆದಾಟ! | ಪತ್ನಿ ಸಹಿ ನಕಲಿ ಮಾಡಿದ ಪತಿ | ಶಿವಮೊಗ್ಗದ ಕ್ರೈಂ ವರದಿಗಳು

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #