BREAKING : ಈಗ ಕನ್​​ಫರ್ಮ್​ ! 2 ತಿಂಗಳ ಕಾಲ ಹುಲಿಕಲ್ ಘಾಟಿ ಬಂದ್​! ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

Malenadu Today

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗಲಿದೆ.  ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

SHIVAMOGGA AIRPORT ನಲ್ಲಿ ಉದ್ಯೋಗವಕಾಶದ ಬಗ್ಗೆ ಸಂಸದ ಬಿ.ವೈ ರಾಘವೇಂದ್ರರವರು ನೀಡಿದ ಸ್ಪಷ್ಟನೆ ಏನು!? ಇಲ್ಲಿದೆ ವಿವರ

ಬದಲಿ ಮಾರ್ಗಗಳು ಯಾವುದು!? 

ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು ಅಥವಾ ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯಲ್ಲಿ ಸಂಚರಿಸಬಹುದು.

ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ -ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗದಲ್ಲಿ ಸಂಚರಿಸಬಹುದು ಎಂದು ತಿಳಿಸಲಾಗಿದೆ.

ಶಿವಮೊಗ್ಗ, ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆಗೆ ಹೋಗು ಲಘು ಮತ್ತು ಭಾರಿ ವಾಹನಗಳು ಹೊಸನಗರ – ನಗರ – ಕೊಲ್ಲೂರು ರಸ್ತೆಯಲ್ಲಿ ಸಂಚರಿಸಲು ಸೂಚಿಸಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗ! ಫೇಕ್​ ಜಾಹಿರಾತು ನಂಬದಿರಿ! ಶಿವಮೊಗ್ಗ ಎಸ್​ಪಿ ಹೇಳಿದ್ದೇನು!?

*Shivamogga news : ಕಾಲೇಜು ಕ್ಯಾಂಪಸ್‌ಗಳಲ್ಲಿ ಹರಡುತ್ತಿರುವ ಗೋಡ್ಸೆ ವೈರಸ್*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Share This Article