BREAKING / ಶಿವಮೊಗ್ಗಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ರಾಹುಲ್ ಗಾಂಧಿ

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Apr 27, 2023 GOOGLE NEWS


ಶಿವಮೊಗ್ಗ/   ಎಐಸಿಸಿ ಮುಖಂಡ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಅವರು ಹಾಗೂ ಭದ್ರತಾ ಸಿಬ್ಬಂದಿ ಪ್ರತ್ಯೇಕ ಪ್ಲೈಟ್​ಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದರು. 

ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 

ರಾಹುಲ್​ ಗಾಂಧಿಯವರು ವಿಮಾನದಿಂದ ಇಳಿಯುತ್ತಲೆ ಅವರಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಹೆಚ್​ಎಸ್​ ಸುಂದರೇಶ್ ಸೇರಿದಂತೆ ವಿವಿಧ ಮುಖಂಡರು ಸ್ವಾಗತ ಕೋರಿದರು.ಇನ್ನೂ ಪ್ರಿಯಾಂಕಾ ಗಾಂಧಿಯವರು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣ ಬಂದು ಸೇರಲಿದ್ದಾರೆ.  

ಮುಖಂಡರ ಜೊತೆ ಮೀಟಿಂಗ್

ಇನ್ನೂ ಎಐಸಿಸಿ ನಾಯಕ ರಾಹುಲ್ ಗಾಂಧಿ, ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ಭೇಟಿಯಾಗಲಿಲ್ಲ. ಒಟ್ಟು 130 ಮಂದಿಗೆ  ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 30 ಮಂದಿಯನ್ಜ  ರಾಹುಲ್ ಗಾಂಧಿ ಭೇಟಿಯಾಗಿದ್ದು, ಅವರ ಜೊತೆ ಚುನಾವಣೆಯ ಸಿದ್ಧತೆ ಬಗ್ಗೆ ಸಮಾಲೋಚನೆ ನಡೆಸಿದ್ರು ಎಂಬ ಮಾಹಿತಿ ತಿಳಿದುಬಂದಿದೆ.  

ಅಭ್ಯರ್ಥಿ ಜೊತೆಗೆ ಸಭೆ

ಮುಖಂಡರ ಜೊತೆ ಸಮಾಲೋಚನೆ ನಡೆಸಿದ ಎಐಸಿಸಿ ಮುಖಂಡ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್​ಸಿ ಯೋಗೇಶ್ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಮತ್ತು ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಬಿ.ಕೆ. ಸಂಗಮೇಶ್ವರ್​  ಹಾಗೂ ಸಾಗರದ ಬೇಳೂರು ಗೋಪಾಲಕೃಷ್ಣ ಮತ್ತು ಶಿಕಾರಿಪುರದ ಅಭ್ಯರ್ಥಿ ಗೋಣಿ ಮಾಲ್ತೇಶ್​ ಜೊತೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕ್ಯಾಂಡಿಡೇಟ್ ಶ್ರೀನಿವಾಸ್ ಕರಿಯಣ್ಣರ ಜೊತೆಗೂ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 

Malenadutoday.com Social media

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor