BREAKING / ರಾಗಿಗುಡ್ಡದಲ್ಲಿ ಜಾರಿಯಾದ 144 ಸೆಕ್ಷನ್ ! ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಗೆ ವಿಸ್ತರಣೆ! ಕಾರಣ?

BREAKING / Section 144 enacted in Ragigudda! Extension to Shimoga City Corporation! The reason?BREAKING / ರಾಗಿಗುಡ್ಡದಲ್ಲಿ ಜಾರಿಯಾದ 144 ಸೆಕ್ಷನ್ ! ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಗೆ ವಿಸ್ತರಣೆ! ಕಾರಣ?

BREAKING / ರಾಗಿಗುಡ್ಡದಲ್ಲಿ ಜಾರಿಯಾದ 144 ಸೆಕ್ಷನ್ ! ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಗೆ ವಿಸ್ತರಣೆ! ಕಾರಣ?

KARNATAKA NEWS/ ONLINE / Malenadu today/ Oct 2, 2023 SHIVAMOGGA NEWS’  

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ವಿಚಾರವಾಗಿ ನಿನ್ನೆಯೆ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಇದರ ಬೆನ್ನಲ್ಲೆ, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 

ಆದೇಶದಲ್ಲಿ ಏನಿದೆ?

ಭಾರತೀಯ ದಂಡ ಪ್ರಕ್ರಿಯಾ ಸಂಹಿತ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಡಾ.ಸಲ್ವಮಣಿ .ಆರ್ ಭಾ.ಆ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಶಿವಮೊಗ್ಗ ಜಿಲ್ಲೆ, ಯವರು ಈ ಆದೇಶ ಹೊರಡಿಸಿದ್ದಾರೆ. 

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿಯೂ ದಿನಾಂಕ:01.10,2023 ರ ರಾತ್ರಿ:12.00 ಗಂಟೆಯಿಂದ ಮುಂದಿನ ಆದೇಶದವರೆಗೆ ಈ ಕಳಕಂಡ ನಿಬಂಧನೆಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ. 

ಏನು ನಿಬಂಧನೆ

  • 1) ನಿಷೇಧಿತ ಅವಧಿಯಲ್ಲಿ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವುದನ್ನು ಮತ್ತು ಓಡಾಡುವುದನ್ನು ನಿಷೇಧಿಸಲಾಗಿದೆ.

  • 2) ನಿಷೇದಾಜ್ಞೆಯ ಅವಧಿಯಲ್ಲಿ ಯಾವುದೇ ಮರವಣಿಗೆ, ಪ್ರತಿಭಟನೆ ಹಾಗೂ ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ.

  • 3) ಯಾವುದೇ ರೀತಿಯ ಘೋಷಣೆಗಳನ್ನು ಕೂಗುವುದು, ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವುದನ್ನು ಹಾಗೂ ಪ್ರಚೋದನಾಕಾರಿ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಕಟ್ಟುವುದನ್ನು ನಿಷೇಧಿಸಲಾಗಿದೆ.

  • 4) ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವುದು ಮತ್ತು ಉಪಯೋಗಿಸುವುದನ್ನು ಹಾಗೂ ಯಾವುದೇ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಮತ್ತು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

  • 5) ಈ ಹಿಂದೆಯೇ ಪೂರ್ವಾನುಮತಿಯನ್ನು ಪಡೆದು ನಿಗಧಿಯಾದಂತಹ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಸಿದೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಶಿಸ್ತು ಕ್ರಮವನ್ನು ಜರುಗಿಸಲಾಗುತ್ತದೆ. 


ಇನ್ನಷ್ಟು ಸುದ್ದಿಗಳು 

  1.  ರಾಗಿಗುಡ್ಡದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ತೆರಳಿದ್ದ ಎಸ್​ಪಿ ಮತ್ತು ಪೊಲೀಸರ ಮೇಲೆ ಕಲ್ಲು ! ಸ್ಥಳದಲ್ಲಿ 144 ಸೆಕ್ಷನ್​ ಜಾರಿ! ಲಾಠಿ ಪ್ರಹಾರ

  2. ನಮಗೆ ಬೆಲೆ ಇರುತ್ತಲ್ಲ ಎಂದು ಪ್ರಶ್ನಿಸಿದ ಬಾಲಕಿ! ಶಿಕ್ಷಕರ ಹಾಗೆ ವಿದ್ಯಾರ್ಥಿನಿಗೆ ಅರ್ಥ ಮಾಡಿಸಿದ ಸಚಿವ! ವೈರಲ್​ ಆಯ್ತು ವಿಡಿಯೋ!