ಬಿಎಸ್‌ಎಫ್ ಕಾನ್‌ಸ್ಟೆಬಲ್ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಬಂಪರ್ ಕೊಡುಗೆ

BSF Recruitment ಭದ್ರತಾ ಪಡೆಯ (ಬಿಎಸ್‌ಎಫ್) ಕಾನ್‌ಸ್ಟೆಬಲ್‌ಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಮಾಜಿ ಅಗ್ನಿವೀರರಿಗೆ ನೀಡಲಾಗುತ್ತಿದ್ದ ಮೀಸಲಾತಿ ಪ್ರಮಾಣವನ್ನು ಕೇಂದ್ರ ಗೃಹ ಇಲಾಖೆಯು ಶೇಕಡ 10 ರಿಂದ ಶೇಕಡ 50 ಕ್ಕೆ ಹೆಚ್ಚಿಸಿದೆ. ಈ ಕುರಿತು ಅಧಿಕೃತವಾಗಿ ರಾಜ್ಯಪತ್ರ ಹೊರಡಿಸಲಾಗಿದ್ದು, ಗಡಿ ಭದ್ರತಾ ಪಡೆಯ ಸಾಮಾನ್ಯ ಸೇವಾ ಶ್ರೇಣಿಯ ನೇಮಕಾತಿ ನಿಯಮಗಳು 2015 ಕ್ಕೆ ಅಗತ್ಯ ತಿದ್ದುಪಡಿ ತರಲಾಗಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿದ ಅನುಭವಿ ಯುವಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಈ ಹೊಸ ನಿಯಮದ ಪ್ರಕಾರ, ಮಾಜಿ ಅಗ್ನಿವೀರರ ಮೊದಲ ತಂಡಕ್ಕೆ ಗರಿಷ್ಠ ಐದು ವರ್ಷಗಳವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು ಮತ್ತು ಆನಂತರದ ತಂಡಗಳಿಗೆ ಮೂರು ವರ್ಷಗಳ ವಯೋಮಿತಿ ವಿನಾಯಿತಿ ಅನ್ವಯವಾಗಲಿದೆ.

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ, 6.43 ಕೋಟಿ ಮೌಲ್ಯದ ಕಳವು ಮಾಲು ವಾರಸುದಾರರಿಗೆ ವಾಪಸ್!

BSF Recruitment  ಮಾಜಿ ಅಗ್ನಿವೀರರಿಗೆ ನೇಮಕಾತಿಯಲ್ಲಿ ಕೇವಲ ಮೀಸಲಾತಿ ಮಾತ್ರವಲ್ಲದೆ ದೈಹಿಕ ಸಾಮಾನ್ಯ ಪರೀಕ್ಷೆ ಮತ್ತು ದೈಹಿಕ ಸದೃಢತೆ ಪರೀಕ್ಷೆಗಳಿಂದಲೂ ಸಂಪೂರ್ಣ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ಪ್ರಕಟಣೆ ತಿಳಿಸಿದೆ. ಪ್ರತಿ ಹಂತದ ನೇರ ನೇಮಕಾತಿಯಲ್ಲೂ ಇವರಿಗಾಗಿ ಸ್ಥಾನಗಳನ್ನು ಕಾಯ್ದಿರಿಸಲಾಗುತ್ತಿದ್ದು, ಮಾಜಿ ಸೈನಿಕರಿಗೆ ಶೇ 10 ಹಾಗೂ ಕಾರ್ಯಾಚರಣೆ ಕಾನ್‌ಸ್ಟೆಬಲ್‌ಗಳಿಗೆ ಶೇ 3 ರಷ್ಟು ಕೋಟಾ ನಿಗದಿಯಾಗಿದೆ. ಉಳಿದ ಶೇ 47 ರಷ್ಟು ಹುದ್ದೆಗಳನ್ನು ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‌ಎಸ್‌ಸಿ) ಮೂಲಕ ಭರ್ತಿ ಮಾಡಲಾಗುವುದು. 2022 ರಲ್ಲಿ ಜಾರಿಗೆ ಬಂದ ಅಗ್ನಿಪಥ್ ಯೋಜನೆಯಡಿ ನಾಲ್ಕು ವರ್ಷಗಳ ಕಾಲ ಭೂಸೇನೆ, ವಾಯುಪಡೆ ಹಾಗೂ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದ ಯುವಕರಿಗೆ ಭವಿಷ್ಯದ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ವಿವಿಧ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

BSF Recruitment Increases Agniveer Quota 50 %

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು