KARNATAKA NEWS/ ONLINE / Malenadu today/ Jul 2, 2023 SHIVAMOGGA NEWS
ಬೆಂಗಳೂರು/ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಸಿಗಲಿದ್ಯಾ? ಹೀಗೊಂದು ವರದಿಯನ್ನ ರಾಜ್ಯ ಎರಡು ಪ್ರಮುಖ ಸುದ್ದಿವಾಹಿನಗಳು ಮಾಡಿದ್ದವು. ರಾಜ್ಯ ವಿಧಾನಸಭಾ ಚುನಾವಣೆಯ ಸೋಲು ಹಾಗೂ ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ರಾಘವೇಂದ್ರರಿಗೆ ಸಂಪುಟದಲ್ಲಿ ಸ್ಥಾನಕೊಟ್ಟು ಲಿಂಗಾಯಿತ ಸಮುದಾಯ ಆಕ್ರೋಶವನ್ನು ತಣ್ಣಗಾಗಿಸುವ ಪ್ರಯತ್ನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ ಎನ್ನುವ ಮಾತುಗಳು ಕೇಳಿಬಂದಿದೆ.
ಬಿ.ಎಸ್. ಯಡಿಯೂರಪ್ಪನವರ ಪುತ್ರರೂ ಆಗಿರುವ, ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡುಲಾಗುತ್ತೆ ಎಂದು ವರದಿಯಲ್ಲಿ ಹೇಳಲಾಗುತ್ತಿದೆ. ಈ ಸಂಬಂಧ ಇವತ್ತು ಮತ್ತು ನಾಳೆ ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರ್ಕಾರ ಮತ್ತು ಬಿಜೆಪಿ ಹೈಕಮಾಂಡ್ನ ಸಭೆಗಳಲ್ಲಿ ತೀರ್ಮಾನವಾಗುವ ಸಾಧ್ಯತೆಗಳಿವೆಯಂತೆ.
ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಬಿ.ವೈ ರಾಘವೇಂದ್ರ, ಇದೆಲ್ಲಾ ಊಹಾಪೋಹ, ಇದ್ಯಾವುದು ನಿಜವಲ್ಲ ಎಂದಿದ್ದಾರೆ. ಯಾವ್ಯಾವ ಸಂದರ್ಭದಲ್ಲಿ ಯಾರ್ಯಾರಿಗೆ ಯಾವ ಸ್ಥಾನಮಾನ ನೀಡಬೇಕು ಎಂಬುದನ್ನು ಸಂಘಟನೆ ನಿರ್ಣಯಿಸುತ್ತದೆ. ಈ ಬಗ್ಗೆ ಏನೇ ಮಾತನಾಡುವುದು ಸರಿಯಾಗುವುದಿಲ್ಲ ಎಂದಿದ್ಧಾರೆ.
