bus accident ಸೀಗೋಡು ಬಳಿ ಬಸ್ ಪಲ್ಟಿ : 3 ಪ್ರವಾಸಿಗರಿಗೆ ಗಾಯ
ಚಿಕ್ಕಮಗಳೂರು : ಕೊಪ್ಪ ತಾಲೂಕಿನ ಸೀಗೋಡು ಬಳಿ ಖಾಸಗಿ ಬಸ್ ಪಲ್ಟಿಯಾಗಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಇಂದು ನಡೆದಿದೆ.
ಬೆಂಗಳೂರಿನ 17 ಜನ ಸ್ನೇಹಿತರು ಆಗುಂಬೆ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಆಗ ಸೀಗೋಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಇದರಿಂದಾಗಿ ಮೂವರು ಪ್ರವಾಸಿಗರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಕೂಡಲೆ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:bus accident

