Bus accident today ಖಾಸಗಿ ಬಸ್ ಪಲ್ಟಿ | ಚಾಲಕ ಪ್ರಾಣಾಪಾಯದಿಂದ ಪಾರು
ಶಿವಮೊಗ್ಗ: ಇಂದು ಬೆಳಗ್ಗೆ ಶಿವಮೊಗ್ಗದ ಅಮೀರ್ ಅಹಮ್ಮದ್ ಸರ್ಕಲ್‌ನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಖಾಸಗಿ ಬಸ್ ಎ.ಎ. ಸರ್ಕಲ್ ಬಳಿ ಬರುತ್ತಿದ್ದಾಗ ಆಟೋವೊಂದು ಅಡ್ಡಬಂದಿದೆ. ಆಟೋವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಘಟನೆ ಸಂಭವಿಸಿದಾಗ ಬಸ್ಸಿನಲ್ಲಿ ಚಾಲಕ ಮಾತ್ರ ಇದ್ದಿದ್ದು ಯಾವುದೇ ಪ್ರಯಾಣಿಕರಿರಲಿಲ್ಲ ಎಂದು ತಿಳಿದುಬಂದಿದೆ.
