ಕುವೆಂಪು ವಿಮಾನ ನಿಲ್ದಾಣಕ್ಕೆ ಪ್ರತಿ ಅರ್ಧ ಗಂಟೆಗೊಂದು ಬಸ್ ಸೌಲಭ್ಯ! ಪೂರ್ತಿ ವಿವರ ಇಲ್ಲಿದೆ !

Malenadu Today

KARNATAKA NEWS/ ONLINE / Malenadu today/ Sep 1, 2023 SHIVAMOGGA NEWS

ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ, ವಿಮಾನ ನಿಲ್ದಾಣಕ್ಕೆ  ಸಾರ್ವಜನಿಕರು ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ (Shimoga – Airport – Kachinkatte)ನೂತನ ಸಾರಿಗೆ ಕಾರ್ಯಾಚರಣೆಯನ್ನು ಅರಂಭಿಸಿದೆ. ಇದರ  ಸಮಯದ ವಿವರವನ್ನು ಇದೀಗ ನೀಡಲಾಗಿದೆ. 

Malenadu Today

ಶಿವಮೊಗ್ಗದಿಂದ ಬೆಳಗ್ಗೆ 8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆಳಗ್ಗೆ 9.00 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್‍ಗಳ ಓಡಾಟವಿರುತ್ತದೆ.  ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. 


ಇನ್ನಷ್ಟು ಸುದ್ದಿಗಳು 


 

 

Share This Article