ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಬಸ್! ಶಿವಮೊಗ್ಗದ ಆಸ್ಪತ್ರೆಯಲ್ಲಿ ಬಾಲಕಿ ಸಾವು!

Malenadu Today

KARNATAKA NEWS/ ONLINE / Malenadu today/ Sep 7, 2023 SHIVAMOGGA NEWS  

ಬಸ್​ವೊಂದು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ತರಿಕೆರೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನೊಬ್ಬಳ ಸ್ಥಿತಿಯು ಗಂಭೀರವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆ ನಡೆದಿದ್ದೇಗೆ?

ತರೀಕೆರೆ ತಾಲ್ಲೂಕಿನ ಸೀತಾಪುರ ಕಾವಲ್​ ದುಗ್ಲಾಪುರ ಗೇಟ್​ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ವಿದ್ಯಾರ್ಥಿನಿಯರಿಗೆ ಬಸ್​ ಡಿಕ್ಕಿ ಹೊಡೆದಿದೆ. ಪರಿಣಾಮ ಘಟನೆಯಲ್ಲಿ ತುಳಸಿ ಹಾಗು ನಿವೇದಿತಾ ಎಂಬ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಓರ್ವ ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ. ಇನ್ನೂ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಬಸ್, ಬಳಿಕ ಅಲ್ಲಿದ್ದ ಮನೆಯೊಂದಕ್ಕೆ ನುಗ್ಗಿದ್ದು, ಮನೆಯ ಛಾವಣಿ ಧ್ವಂಸವಾಗಿದೆ.  


   

ಇನ್ನಷ್ಟು ಸುದ್ದಿಗಳು 


 

 

Share This Article