ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ (ripponpet) ಸಮೀಪ ಶಾಲೆ ಮಕ್ಕಳನ್ನು ಕರೆತರುತ್ತಿದ್ದ ಟೂರಿಸ್ಟ್ ಬಸ್ ಹಾಗು ಕಾರೊಂದರ ನಡುವೆ ಡಿಕ್ಕಿಯಾಗಿದೆ. ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ?
ಬೆಂಗಳೂರಿನಿಂದ ಶಾಲೆ ಮಕ್ಕಳನ್ನು ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿಂದ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ ಹೊಂಬುಜ ದೇವಸ್ಥಾನಕ್ಕೆ ಹೊರಟಿದ್ದ ಮಾರುತಿ ಬಲೆನೋ ಕಾರು ಹಾಗು ಬಸ್ ನಡುವೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ವಿದ್ಯಾರ್ಥಿಗಳು ಗಾಯಗೊಂಡಿಲ್ಲ. ಇನ್ನೂ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com