KARNATAKA NEWS/ ONLINE / Malenadu today/ May 1, 2023 GOOGLE NEWS
ಹೊಸನಗರ ಶಿವಮೊಗ್ಗ/ ಇಲ್ಲಿನ ಮಾಸ್ತಿಕಟ್ಟೆ ಬಳಿಯಲ್ಲಿ ನಿನ್ನೆ ಅಪಘಾತ ಸಂಭವಿಸಿದೆ. ಕುಂದಾಪುರ ಕ್ಕೆ ಹೋಗುತ್ತಿದ್ದ ಬಸ್ವೊಂದು ಆಕ್ಸಿಡೆಂಟ್ ಆಗಿದ್ದು, ಘಟನೆಯಲ್ಲಿ 15 ಮಂದಿಗೆ ಗಾಯಗಳಾಗಿವೆ.
ಹೇಗಾಯ್ತು ಅಪಘಾತ!
ಬೆಂಗಳೂರಿನಿಂದ ಕುಂದಾಪುರಕ್ಕೆ ದುರ್ಗಾಂಬಾ ಬಸ್ ತೆರಳುತ್ತಿತ್ತು. ಮಾಸ್ತಿಕಟ್ಟೆಯ ಬಳಿ ಸಿಗುವ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಬಳಿ ಬಸ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದಿದೆ.
ಇದನ್ನ ಓದಿ/ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿವಮೊಗ್ಗ ಕೋರ್ಟ್ ನೀಡಿತು ಭಾರೀ ಶಿಕ್ಷೆ
ಘಟನೆಯಲ್ಲಿ 15 ಮಂದಿಗೆ ಗಾಯಗಳಾಗಿದ್ದು, ವಿಷಯ ತಿಳಿಯುತ್ತಲೇ ಸ್ಥಳೀಯರು ಸಹಾಯಕ್ಕಾಗಿ ದೌಡಾಯಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ 108 ಆ್ಯಂಬುಲೆನ್ಸ್ (108 ambulance) ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದೆ. ಆನಂತರ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.
