ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಇವತ್ತು ಬೆಳಗ್ಗೆ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗವಾಗಿದ್ದು, ಓರ್ವರಿಗೆ ಗಂಭೀರ ಪೆಟ್ಟುಗಳಾಗಿವೆ. ಗಜಾನನ ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಬಸ್ ಮುಂಭಾಗ ಜಖಂಗೊಂಡಿದೆ.
ಮಲೆನಾಡು APMCಗಳಲ್ಲಿ ಅಡಿಕೆ ವಹಿವಾಟು ಜೋರು! ಶಿವಮೊಗ್ಗ, ಸಾಗರ, ಯಲ್ಲಾಪುರ, ಶಿರಸಿ! ಎಲ್ಲೆಲ್ಲಿ ಎಷ್ಟಾಗಿದೆ ಅಡಿಕೆ ದರ






ರಿಪ್ಪನ್‌ಪೇಟೆ ಸಮೀಪ ನಡೆದ ಘಟನೆ
ಕೋಡೂರು ರಸ್ತೆಯಲ್ಲಿ ಗಜಾನನ ಬಸ್ ಮತ್ತು ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಬಸ್ ಜಖಂಗೊಡಿದ್ದು, ಬಸ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಣ್ಣಪುಟ್ಟ ಪೆಟ್ಟು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಹೆಚ್ಚು ಅಪಾಯವಾಗಿಲ್ಲ. ಆದರೆ ಓರ್ವ ಮಹಿಳಾ ಪ್ರಯಾಣಿಕರ ತಲೆಗೆ ಪೆಟ್ಟು ಬಿದ್ದಿದ್ದರಿಂದ ಅವರ ಸ್ಥಿತಿ ಗಂಭೀರವಾಗಿದೆ. ಇನ್ನೂ ಸ್ಥಳೀಯರು ವಿಷಯ ತಿಳಿಯುತ್ತಲೆ ಸ್ಥಳಕ್ಕೆ ಬಂದು ಆಂಬುಲೆನ್ಸ್ ಕರೆಸಿಕೊಂಡು ಗಾಯಾಗಳುಗಳನ್ನ ಹೊಸನಗರ ಆಸ್ಪತ್ರೆಗೆ ರವಾನಿಸಿದರು. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಬಂಧ ಪೊಲೀಶರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇ ಸ್ವತ್ತು ವಿತರಣೆ ತಾತ್ಕಾಲಿಕ ಸ್ಥಗಿತ! ಕಾರಣ ಇದೆ! ಪೂರ್ತಿ ವಿವರ ಓದಿ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ಇಬ್ಬರಿಗೆ ಗಂಭೀರ ಗಾಯ
