ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 18 2025 : ಶಿವಮೊಗ್ಗ ರಂಗಾಯಣ ರಂಗಭೀಷ್ಮ ಬಿ.ವಿ. ಕಾರಂತರ ಜನ್ಮದಿನದ ನೆನಪಿನಲ್ಲಿ ಸೆ. 19 ರಂದು ಸಂಜೆ 6.00ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ರಂಗಗೀತೆ ಮತ್ತು ನಾಟಕ ಪ್ರದರ್ಶನವನ್ನು ಆಯೋಜಿಸಿದೆ.
ಕಾರ್ಯಕ್ರಮವನ್ನು ರಂಗಾಯಣದ ನಿರ್ದೇಶಕ ಪ್ರಸನ್ನ ಡಿ. ಸಾಗರ ಇವರ ಅಧ್ಯಕ್ಷತೆಯಲ್ಲಿ ಖ್ಯಾತ ರಂಗ ನಿರ್ದೇಶಕ ಹುಲಗಪ್ಪ ಕಟ್ಟಿಮನಿ ಉದ್ಘಾಟಿಸಲಿದ್ದಾರೆ. ರಂಗಾಯಣದ ನಿಕಟಪೂರ್ವ ನಿರ್ದೇಶಕ ಸಂದೇಶ್ ಜವಳಿ, ರಂಗಗೀತೆ ತರಬೇತುದಾರರಾದ ಶ್ರೀಮತಿ ನಾಗರತ್ನ ಟಿ.ಜೆ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಂಗಾಯಣದ ರೆಪರ್ಟರಿ ಕಲಾವಿದರಿಂದ ರಂಗ ಸಂಗೀತ ಕಾರ್ಯಕ್ರಮ, 6.30ಕ್ಕೆ ನಟಮಿತ್ರರು, ತೀರ್ಥಹಳ್ಳಿ ತಂಡದ ಕಲಾವಿದರಿಂದ ಡಾ.ಜಿ.ಬಿ.ಜೋಷಿ ರಚನೆಯ, ಹುಲುಗಪ್ಪ ಕಟ್ಟಿಮನಿ ನಿರ್ದೇಶನದ “ಆ ಊರು ಈಊರು” ನಾಟಕ ಪ್ರದರ್ಶನಗೊಳ್ಳಲಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ. ಕೋರಿದ್ದಾರೆ. ನಾಟಕ ಪ್ರದರ್ಶನದ ಟಿಕೆಟ್ ದರ ಒಬ್ಬರಿಗೆ ರೂ. 30/-.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!