By raghavendra : ಶಿವಮೊಗ್ಗ : ಜಿಲ್ಲೆಯಲ್ಲಿ ಅಳಿವಿನಂಚಿನಲ್ಲಿರುವ 700ಕ್ಕೂ ಹೆಚ್ಚು ಔಷಧೀಯ ಸಸ್ಯಗಳನ್ನು ಸಂರಕ್ಷಿಸುವ ಉದ್ದೇಶದಿಂದ, ಶಿವಮೊಗ್ಗದಲ್ಲಿ ‘ಅಖಿಲ ಭಾರತ ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ’ ಸ್ಥಾಪಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಆಯುಷ್ ಸಚಿವ ಪ್ರತಾಪ್ ರಾವ್ ಗಣಪತ್ ರಾವ್ ಜಾಧವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಆಗಸ್ಟ್ 20 ರಂದು ಸಚಿವರನ್ನು ಭೇಟಿ ಮಾಡಿದ ಸಂಸದರು, ಶಿವಮೊಗ್ಗ ಜಿಲ್ಲೆ ಔಷಧೀಯ ಸಸ್ಯಗಳ ತವರಾಗಿದ್ದು, ಇಲ್ಲಿ ಹಲವು ಅಮೂಲ್ಯ ಸಸ್ಯಗಳು ಅಳಿವಿನಂಚಿನಲ್ಲಿವೆ ಎಂದು ವಿವರಿಸಿದರು. ಇಂತಹ ಸಸ್ಯಗಳನ್ನು ರಕ್ಷಿಸಿ ಪೋಷಿಸಿದರೆ ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆಗಳಿಗೆ ದೊಡ್ಡ ಕೊಡುಗೆಯಾಗಲಿದೆ ಎಂದು ಅವರು ಹೇಳಿದರು. ಈ ಹಿನ್ನೆಲೆಯಲ್ಲಿ, ಶಿವಮೊಗ್ಗದಲ್ಲಿ ಆಯುಷ್ ಸಂಸ್ಥೆಯನ್ನು ಸ್ಥಾಪಿಸುವಂತೆ ಒತ್ತಾಯಿಸಿದರು.
ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
By raghavendra
