BY Raghavendra ಶಿವಮೊಗ್ಗ, ಆಗಸ್ಟ್ 7 , malenadutoday news : ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮತ್ತೊಂದು ಫೈಲ್ ಹಿಡಿದು, ದೆಹಲಿಯಲ್ಲಿ ಕೇಂದ್ರ ಸಚಿವರನ್ನ ಭೇಟಿಯಾಗಿದ್ದಾರೆ. ಈ ಭಾರಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ರನ್ನು ಭೇಟಿಯಾದ ಸಂಸದರು ಮೂರು ಬೇಡಿಕೆಗಳನ್ನು ಅವರ ಮುಂದೆ ಇಟ್ಟಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸದ ಬಿ.ವೈ. ರಾಘವೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರ ಜೊತೆಯಲ್ಲಿ ಚರ್ಚಿಸಿದ್ದಾರೆ. ಇತ್ತೀಚೆಗಷ್ಟೆ ಅವರು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚಿಸಿದ್ದರು.
ನಿರ್ಮಲಾ ಸೀತಾರಾಮನ್ ಬಳಿ ಸಂಸದರ 3 ಡಿಮ್ಯಾಂಡ್
ಸಿಜಿಎಚ್‌ಎಸ್ (CGHS) ಯೋಜನೆ ಅಡಿಯಲ್ಲಿ ಶಿವಮೊಗ್ಗದಲ್ಲಿ ಆಸ್ಪತ್ರೆ ಸ್ಥಾಪಿಸಲು ಮಂಜೂರಾತಿ ಮತ್ತು ಅನುದಾನ ನೀಡುವಂತೆ ಸಂಸದರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ನಬಾರ್ಡ್ ಅಡಿಯಲ್ಲಿ ಅಡಿಕೆ ಬೆಳೆಗಾರರಿಗೆ ಮೌಲ್ಯವರ್ಧನೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬಾಕಿ ಇರುವ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ‘ಪ್ರಸಾದ್’ (PRASAD) ಯೋಜನೆಯಡಿ ಸೇರಿಸುವಂತೆ ಕೋರಿದ್ದಾರೆ.

ಸಿಗಲಿದೆಯಾ ಅನುದಾನ
ಅಡಿಕೆ ಬೆಳೆಗಾರರಿಗೆ ಅನುಕೂಲವಾಗುವ ಉದ್ದೇಶದಿಂದ ನಬಾರ್ಡ್ ಯೋಜನೆಯ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸಂಸದರು ವಿನಂತಿಸಿದ್ದಾರೆ. ಇತ್ತ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವನ್ನು ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ‘ಪ್ರಸಾದ್’ (PRASAD) ಯೋಜನೆಯಡಿ ಸೇರಿಸುವಂತೆ ಮನವಿ ಮಾಡಿದ್ದಾರೆ. ಇದರಿಂದಾಗಿ ಹೆಚ್ಚಿನ ಅನುಧಾನ ಸಿಗಲಿದೆ ಎಂಬ ನಿರೀಕ್ಷೆಯಿದೆ. ಇತ್ತ ಶಿವಮೊಗ್ಗ, ಮಂಗಳೂರು ಮತ್ತು ಉಡುಪಿಯಲ್ಲಿರುವ ಸಿಜಿಎಚ್‌ಎಸ್ (CGHS – Central Government Health Scheme) ಕ್ಷೇಮ ಕೇಂದ್ರಗಳಿಗೆ ಅಗತ್ಯವಿರುವ ಹುದ್ದೆಗಳನ್ನು ಮಂಜೂರು ಮಾಡಿ, ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಎಲ್ಲ ಮನವಿಗಳಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಹೇಳಲಾಗಿದೆ.