By raghavendra ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ರವರು ನಿನ್ನೆ ದೆಹಲಿಗೆ ತೆರಳಿ ಅಲ್ಲಿ ಕೇಂದ್ರ ಗೃಹ ಸಚಿಚ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌವಾಣ್ ರನ್ನು ಭೇಟಿ ಮಾಡಿದರು, ಅಷ್ಟೆ ಅಲ್ಲದೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಆಗಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
By raghavendra ಈ ಹಿಂದೆ ಸಂಸದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ ಸೋಮಣ್ಣರನ್ನು ಭೇಟಿಮಾಡಿ ಎರ್ನಾಕುಲಂ-ಮಡಗಾಂವ್ ಎಕ್ಸ್‌ಪ್ರೆಸ್ ರೈಲನ್ನು ಮೂಕಾಂಬಿಕಾ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲು ಮತ್ತು ಪ್ರತಿದಿನ ಓಡಿಸಲು ಮನವಿ ಮಾಡಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ವಿವಿಧ ಅಭಿವೃದ್ದಿ ಕಾರ್ಯಗಳ ಬಗ್ಗೆ ಚರ್ಚೆ ನಡೆಸಿದ್ದರು. ಇದೀಗ ನಿನ್ನೆಯೂ ಸಹ ಕೇಂದ್ರ ಗೃಹ ಸಚಿವ ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ವಿವಿಧ ಕಾಮಗಾರಿಗಳಿಗೆ ಸೂಕ್ತ ಅನುದಾನ ನೀಡುವಂತೆ ಮನವಿ ಮಾಡಿರುವುದು ಕುತೂಹಲ ಮೂಡಿಸಿದೆ.
By raghavendra ಸಚಿವರ ಮುಂದೆ ಸಂಸದರು ಇಟ್ಟ ಬೇಡಿಕೆಯೇನು
ಮೊದಲಿಗೆ ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌವಾಣ್ ಇವರನ್ನು ಭೇಟಿಯಾದ ಸಂಸದರು ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ಕೆಲವು ತಾಲ್ಲೂಕುಗಳು ಭೌಗೋಳಿಕವಾಗಿ ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳಾಗಿದೆ. ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಮಲೆನಾಡು ಭಾಗದ ಗ್ರಾಮೀಣ ಪ್ರದೇಶದ ರಸ್ತೆಗಳು ಹಾಳಾಗಿದ್ದು, ಒಟ್ಟು 341 ಕಿಲೋ ಮೀಟರ್ ರಸ್ತೆಗಳಿಗೆ ಮರು ಡಾಂಬರೀಕರಣ ಮಾಡಬೇಕಿದೆ. ಹಾಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅಭಿವೃದ್ಧಿ ಪಡಿಸಲು ಪ್ರಸ್ತಾವನೆಯನ್ನು ಸಲ್ಲಿಸಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
ಹಾಗೆಯೇ ಇತ್ತ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಯಾಗಿ ಮೊದಲಿಗೆ ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಇದರ ನಡುವೆ ಶಿವಮೊಗ್ಗ ತಾಲ್ಲೂಕು ತಮ್ಮಡಿಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು 22 ಎಕರೆ 19 ಗುಂಟೆ ಜಾಗವು ಮಂಜೂರಾಗಿದೆ, ಆ ಜಾಗದಲ್ಲಿ ಖಾಯಂ ಆಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಹೊಂದಲು ಅನುಕೂಲವಾಗುವಂತೆ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ, ವಸತಿ ಗೃಹಗಳು, ಕಾಂಪೌಂಡ್ ನಿರ್ಮಾಣ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸ ಬೇಕಿದೆ ಆದ್ದರಿಂದ ಅದಕ್ಕೆ ಸೂಕ್ತ ಅನುದಾದ ಅವಶ್ಯಕತೆ ಇದ್ದು ಅನುದಾನವನ್ನು ನೀಡುವಂತೆ ಮನವಿ ಸಲ್ಲಿಸಿದರು.
