By raghavendra birthday : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅನೇಕ ರಾಜಕೀಯ ನಾಯಕರು ಮತ್ತು ಗಣ್ಯರು ಅವರಿಗೆ ಶುಭ ಕೋರಿದ್ದಾರೆ. ಇದೇ ವೇಳೆ, ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪತ್ರ ಬರೆದು ಸಂಸದರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು, ಅವರ ಶ್ರಮವನ್ನು ಶ್ಲಾಘಿಸಿದ್ದಾರೆ.
By raghavendra birthday : ಪ್ರಧಾನಿ ಪತ್ರದಲ್ಲಿ ಏನಿದೆ
ಪ್ರಧಾನಿ ಮೋದಿ ಅವರು ಬರೆದಿರುವ ಪತ್ರದಲ್ಲಿ, “ಬಿ.ವೈ. ರಾಘವೇಂದ್ರ ಜೀ, ನಿಮ್ಮ ಹುಟ್ಟುಹಬ್ಬದ ಈ ಸಂದರ್ಭವು ಹಿಂದಿನ ಸಾಧನೆಗಳಿಂದ ಸ್ಫೂರ್ತಿ ಪಡೆಯಲು ಮತ್ತು ಇತರರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಇರುವ ಅವಕಾಶಗಳನ್ನು ಬಳಸಿಕೊಳ್ಳಲು ಶಕ್ತಿ ತುಂಬುವ ಕ್ಷಣವಾಗಿದೆ. ನಿಮ್ಮ ಸಮರ್ಪಣೆ ಮತ್ತು ಕಠಿಣ ಪರಿಶ್ರಮವು ರಾಷ್ಟ್ರದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ,” ಎಂದು ಹೇಳಿದ್ದಾರೆ.
ಅಮೃತ ಕಾಲದ ಈ ಯುಗದಲ್ಲಿ ನಾವು ಕ್ಷಿಪ್ರಗತಿಯಲ್ಲಿ ಹೆಜ್ಜೆ ಇಡುತ್ತಿದ್ದು, ಅಭಿವೃದ್ಧಿ ಹೊಂದಿದ, ಸಮೃದ್ಧ ಮತ್ತು ಎಲ್ಲರನ್ನೂ ಒಳಗೊಂಡ ಭಾರತವನ್ನು ನಿರ್ಮಿಸಲು ಶ್ರಮಿಸುತ್ತಿದ್ದೇವೆ. ನಿಮ್ಮ ನಿರಂತರ ಪ್ರಯತ್ನಗಳು ರಾಷ್ಟ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ನನಗೆ ವಿಶ್ವಾಸವಿದೆ.ಮುಂದಿನ ವರ್ಷವು ನಿಮಗೆ ಸಂತೋಷ, ಶಾಂತಿ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ ಎಂದು ಹಾರೈಸುತ್ತೇನೆ. ಎಂದು ಪತ್ರವನ್ನು ಬರೆದಿದ್ದಾರೆ.
By raghavendra birthday : ನಿಮ್ಮ ನಾಯಕತ್ವ ನಮಗೆ ಪ್ರೇರಣೆ : ಬಿವೈ ರಾಘವೇಂದ್ರ
ಪ್ರಧಾನಿ ಮೋದಿಯವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ. “ನನ್ನ ಜನ್ಮದಿನದ ಅಂಗವಾಗಿ ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಜೀ ಅವರಿಂದ ಶುಭಾಶಯ ಸ್ವೀಕರಿಸಲು ನಿಜವಾಗಿಯೂ ಗೌರವ ಮತ್ತು ಕೃತಜ್ಞತೆಗಳು. ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ, ನಿಮ್ಮ ಆತ್ಮೀಯ ಶುಭಾಶಯಗಳು ಮತ್ತು ದಯೆಯ ಮಾತುಗಳಿಗೆ ಧನ್ಯವಾದಗಳು,” ಎಂದು ಬರೆದುಕೊಂಡಿದ್ದಾರೆ.
ಜೊತೆಗೆ, “ನಿಮ್ಮ ನಾಯಕತ್ವವು ವಿಕಸಿತ ಭಾರತದ ಕನಸನ್ನು ನನಸಾಗಿಸಲು ನಮಗೆ ಇನ್ನಷ್ಟು ಕಠಿಣವಾಗಿ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ. ನಿಮ್ಮ ಆಶೀರ್ವಾದ ಮತ್ತು ಮಾರ್ಗದರ್ಶನ ಸದಾ ನನ್ನನ್ನು ಪ್ರೇರೇಪಿಸುತ್ತಿರಲಿ,” ಎಂದು ಕೃತಜ್ಙತೆಗಳನ್ನು ಸಲ್ಲಿಸಿದ್ದಾರೆ.
