SHIVAMOGGA NEWS TODAY

ಹಾವೇರಿಯಲ್ಲಿ ನಡೆಯುತ್ತಿರುವುದು ಸಾಧನಾ ಸಮಾವೇಶವಲ್ಲ, ಅದು ಯಾತನಾ ಸಮಾವೇಶ: ಸಂಸದ ಬಿ.ವೈ. ರಾಘವೇಂದ್ರ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

BY Raghavendra Slams ಶಿವಮೊಗ್ಗ: ಕಾಂಗ್ರೆಸ್ ಸರ್ಕಾರವು ಹಾವೇರಿಯಲ್ಲಿ ಹಮ್ಮಿಕೊಂಡಿರುವುದು ಸಾಧನಾ ಸಮಾವೇಶವಲ್ಲ, ಅದು ರಾಜ್ಯದ ಜನತೆಗೆ ನೀಡುತ್ತಿರುವ ಯಾತನಾ ಸಮಾವೇಶ ಎಂದು ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ. 

ಶಿವಮೊಗ್ಗ: ಸೋಗಾನೆ ಜೈಲಿಗೆ ಗಾಂಜಾ, ಮೊಬೈಲ್ ಎಸೆದಿದ್ದ  ನಾಲ್ವರು ಅರೆಸ್ಟ್​​

ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಚನ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ಸಮಾವೇಶ ನಡೆಸುತ್ತಿದೆ. ಆದರೆ, ಈ ಸಾವಿರ ದಿನಗಳ ಅವಧಿಯಲ್ಲಿ ಸರ್ಕಾರ ಮಾಡಿರುವ ಒಟ್ಟು ಸಾಲ ಮತ್ತು ಅಭಿವೃದ್ಧಿ ಕೆಲಸಗಳಿಗೆ ವ್ಯಯಿಸಿರುವ ಹಣದ ಬಗ್ಗೆ ತಕ್ಷಣವೇ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

BY Raghavendra Slams ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಒಂದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ ಸರಿಸುಮಾರು 2,809 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಸಮಾವೇಶ ನಡೆಯುತ್ತಿರುವ ಹಾವೇರಿ ಜಿಲ್ಲೆಯಲ್ಲೇ 300ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ನೋವಿನ ಪರಿಸ್ಥಿತಿಯಲ್ಲಿ ವಿಜೃಂಭಣೆಯ ಸಮಾವೇಶ ನಡೆಸುವುದು ಜನರನ್ನು ಮುಜುಗುರಕ್ಕೆ ಈಡುಮಾಡುವ ಕೆಲಸವಾಗಿದೆ. ಈ ದಿನವನ್ನು ವಿರೋಧ ಪಕ್ಷವಾಗಿ ನಾವು ವಂಚನೆ, ಭ್ರಷ್ಟಾಚಾರ, ದುರಾಡಳಿತ ಹಾಗೂ ಆರ್ಥಿಕ ದಿವಾಳಿತನದ ಪರ್ವ ಎಂದು ಘಂಟಾಘೋಷವಾಗಿ ಕರೆಯುತ್ತೇವೆ ಎಂದು ಅವರು ಆಕ್ರೋಶ ಹೊರಹಾಕಿದರು.

ಸರ್ಕಾರವು ಪಂಚ ಗ್ಯಾರಂಟಿಗಳ ಮೂಲಕ ಒಂದು ಕೈಯಲ್ಲಿ ಜನರಿಗೆ ಹಣ ನೀಡಿ, ಮತ್ತೊಂದು ಕೈಯಿಂದ ಅದನ್ನು ಕಿತ್ತುಕೊಳ್ಳುತ್ತಿದೆ. ಗೃಹಲಕ್ಷ್ಮಿ ಯೋಜನೆಯ 5,500 ಕೋಟಿ ರೂಪಾಯಿ ಹಣಕ್ಕೆ ಈವರೆಗೆ ಯಾವುದೇ ಲೆಕ್ಕವಿಲ್ಲ. ಯುವನಿಧಿ ಯೋಜನೆಯಲ್ಲಿ ಕೇವಲ ಶೇಕಡಾ 60 ರಷ್ಟು ಜನರಿಗೆ ಮಾತ್ರ ಸೌಲಭ್ಯ ಸಿಗುತ್ತಿದ್ದು, 3.79 ಲಕ್ಷ ನೋಂದಣಿಯಾಗಿದ್ದರೂ ಕೇವಲ 2.90 ಲಕ್ಷ ಯುವಕರಿಗೆ ಮಾತ್ರ ಹಣ ಜಮೆಯಾಗುತ್ತಿದೆ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಗೆ 4,800 ಕೋಟಿ ರೂಪಾಯಿ ಬಾಕಿ ನೀಡಬೇಕಿದೆ.  ಗ್ರಾಮೀಣ ಪ್ರದೇಶಗಳ್ಲಲಿ 1,200 ರೂಟ್‌ಗಳಲ್ಲಿ ಸಂಚರಿಸುವ ಬಸ್‌ಗಳನ್ನು ರದ್ದುಗೊಳಿಸಿದ್ದಾರೆ. ಅದನ್ನು ನಗರಕ್ಕೆ ಸೀಮಿತ ಮಾಡಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ಇದರ ಮೂಲಕ ಗ್ರಾಮೀಣ ಪ್ರದೇಶದ  ಮಹಿಳೆಯರು ಮಕ್ಕಳಿಗೆ ಸಮಸ್ಯೆ ಆಗುತ್ತಿದೆ. ಇದರ ಮೂಲಕ ಗ್ರಾಮೀಣ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ವಿವರಿಸಿದರು.

ಉಚಿತ ವಿದ್ಯುತ್ ವಿಚಾರವಾಗಿ ವಾಣಿಜ್ಯ ಮತ್ತು ಕೈಗಾರಿಕಾ ದರವನ್ನು ಹೆಚ್ಚಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲಿಗೆ ಹಣ ನೀಡುತ್ತೇವೆ ಎಂದಿದ್ದ ಸರ್ಕಾರ, ಜನವರಿ ತಿಂಗಳಿನಿಂದ 657 ಕೋಟಿ ರೂಪಾಯಿ ವ್ಯತ್ಯಾಸದ ಹಣವನ್ನು ಗ್ರಾಹಕರಿಗೆ ನೀಡಿಲ್ಲ. ಅತ್ತ ಅಕ್ಕಿಯೂ ಇಲ್ಲ, ಇತ್ತ ಹಣವೂ ಇಲ್ಲದಂತಾಗಿದೆ. ದಲಿತರ ಅಭಿವೃದ್ಧಿಗಾಗಿ ಮೀಸಲಿದ್ದ ಶೇಕಡಾ 30 ರಿಂದ 35ರಷ್ಟು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಲಿತ ಸಮುದಾಯಕ್ಕೂ ಸರ್ಕಾರ ಖನ್ನ ಹಾಕಿದೆ. ಗುತ್ತಿಗೆದಾರರಿಗೆ 37,000 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿರುವ ಈ ಸರ್ಕಾರಕ್ಕೆ ಗುತ್ತಿಗೆದಾರರೇ ’60 ಪರ್ಸೆಂಟ್ ಸರ್ಕಾರ’ ಎಂದು ಹೆಸರಿಟ್ಟಿದ್ದಾರೆ ಎಂದು ರಾಘವೇಂದ್ರ ಲೇವಡಿ ಮಾಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಜೈಲುಗಳು ಇಂದು ರೆಸಾರ್ಟ್‌ಗಳಾಗಿ ಬದಲಾಗಿವೆ. ಬಳ್ಳಾರಿಯಲ್ಲಿ ರಕ್ತ ಚರಿತ್ರೆಯ ಗೂಂಡಾಗಿರಿ ನಡೆಯುತ್ತಿದೆ. ಮರಳು ಮಾಫಿಯಾವನ್ನು ಪ್ರಶ್ನಿಸುವ ಅಧಿಕಾರಿಗಳ ಮೇಲೆ ಲಾರಿ ಹತ್ತಿಸಿ ಕೊಲ್ಲುವ ಸಾಹಸಗಳು ನಡೆಯುತ್ತಿವೆ. ಮಹಿಳೆಯರಿಗೆ ಈ ಸಮಾಜದಲ್ಲಿ ರಕ್ಷಣೆ ಇಲ್ಲದಂತಾಗಿದ್ದು, ರಾಜ್ಯದ ಅನೇಕ ಘಟನೆಗಳೇ ಇದಕ್ಕೆ ಸಾಕ್ಷಿಯಾಗಿವೆ. ಇದರ ನಡುವೆ ಸಮಾವೇಶ ನಡೆಸುತ್ತಿದ್ದು ಈ ಸಾವಿರ ದಿನಗಳ ಅವಧಿಯಲ್ಲಿ ಸರ್ಕಾರ ಮಾಡಿರುವ ಒಟ್ಟು ಸಾಲ ಮತ್ತು ಅಭಿವೃದ್ಧಿ ಕೆಲಸಗಳಿಗೆ ವ್ಯಯಿಸಿರುವ ಹಣದ ಬಗ್ಗೆ ತಕ್ಷಣವೇ ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಹಾಗೆಯೇ ಇನ್ನು ಆಗುಂಬೆ ಟನಲ್​ ಹಾಗೂ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ 2.5 ಕೋಟಿಯ ಡಿಪಿಆರ್​ ಟೆಂಡರ್​ ಅನ್ನು ಆಹ್ವಾನಿಸಲಾಗಿದೆ ಎಂದರು.

BY Raghavendra Slams Congress Haveri Convention

BY Raghavendra Slams Congress Haveri Convention
BY Raghavendra Slams Congress Haveri Convention
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.