ಸಿದ್ಧರಾಮಯ್ಯ ನಿವೃತ್ತಿ ನಿರ್ಧಾರ, ಕಾವೇರಿ ವಿಚಾರ, ಬಿವೈ ವಿಜಯೇಂದ್ರ ಹೇಳಿದ್ದೇನು

ಹಂಚಿಕೊಳ್ಳಿ
WhatsApp Facebook X Telegram
BY Vijayendra Attacks Karnataka Govt in Shivamogga
BY Vijayendra Attacks Karnataka Govt in Shivamogga

BY Vijayendra ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು, ಸಿದ್ದರಾಮಯ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಹಾಗೂ ಸಿ.ಟಿ. ರವಿ ಹೇಳಿಕೆ ವಿಚಾರ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ : ಜುಲೈ 25 ಮತ್ತು 26 ರಂದು ಮತದಾರರ ಪಟ್ಟಿಯ ವಿಶೇಷ ಪ್ರಚಾರ ದಿನ  

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ತಮಿಳುನಾಡಿಗೆ ಏಕಪಕ್ಷೀಯವಾಗಿ ಕಾವೇರಿ ನೀರು ಹರಿಸಲು ಮುಂದಾಗಿರುವ ಸಿಎಂ ಡಿ.ಕೆ. ಶಿವಕುಮಾರ್ ತೀರ್ಮಾನವು ಕಾವೇರಿ ಕೊಳ್ಳದ ರೈತರಿಗೆ ಬರೆ ಎಳೆದಂತಾಗಿದೆ, ರೈತರಿಗೆ ಆತ್ಮಸ್ಥೈರ್ಯ ತುಂಬಬೇಕಾದ ಸರ್ಕಾರವೇ ಅವರ ಸ್ಥೈರ್ಯ ಕುಗ್ಗಿಸುತ್ತಿದೆ ಎಂದರು. ಸದ್ಯ ಜಲಾಶಯದಲ್ಲಿರುವ 17.39 ಟಿಎಂಸಿ ಪೈಕಿ 5 ಟಿಎಂಸಿ ಡೆಡ್ ಸ್ಟೋರೇಜ್ ಕಳೆದರೆ, ಉಳಿದ 13 ಟಿಎಂಸಿ ನೀರನ್ನೂ ಹರಿಸಿದರೆ ನಮ್ಮ ರೈತರ ಕಥೆ ಏನು ಎಂದು ಪ್ರಶ್ನಿಸಿದ ಅವರು, ಜುಲೈ 31 ರಂದು ಮಂಡ್ಯದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಇದೇ ವೇಳೆ ಬಾಂಗ್ಲಾ ಅಕ್ರಮ ನುಸುಳುಕೋರರ ವಿರುದ್ಧ ಧ್ವನಿ ಎತ್ತಿದ್ದ ಬೆಂಗಳೂರಿನ ವೈದ್ಯ, ಸಾಮಾಜಿಕ ಕಾರ್ಯಕರ್ತ ಡಾ. ಟಿ. ನಾಗೇಂದ್ರಪ್ಪ ಅವರ ವಿರುದ್ಧ ಎಫ್.ಐ.ಆರ್. ದಾಖಲಿಸಿರುವುದರ ಕುರಿತು ಮಾತನಾಡಿದ ಅವರು, ಅಲ್ಪಸಂಖ್ಯಾತರ ಓಲೈಕೆಗಾಗಿ ಸರ್ಕಾರ ದೇಶದ್ರೋಹದ ಕೆಲಸ ಮಾಡುತ್ತಿದೆ ಹಾಗೂ ಹೋರಾಟಗಾರರನ್ನು ದಮನಿಸುತ್ತಿದೆ, ಸಿ.ಟಿ. ರವಿ ಅವರ ಹೇಳಿಕೆ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಅವರು ನಡೆದುಕೊಳ್ಳುತ್ತಿರುವ ರೀತಿ ಸರಿಯಿಲ್ಲ; ತಾವು ಗೃಹ ಸಚಿವರಂತೆ ವರ್ತಿಸುತ್ತಾ ಬಿಜೆಪಿ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಸಿದರು.

ಇನ್ನು ಸಿದ್ದರಾಮಯ್ಯನವರ ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರದ ಕುರಿತು ಮಾತನಾಡಿದ ವಿಜಯೇಂದ್ರ, ಮುಂಬರುವ 2028ರ ಚುನಾವಣೆಯಲ್ಲಿ 80 ಸ್ಥಾನ ಗೆಲ್ಲುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಪಕ್ಷ, ಸಿಎಂ ಅವರ ಈ ನಿರ್ಧಾರದಿಂದಾಗಿ ಮುಂಬರುವ ಚುನಾವಣೆಯಲ್ಲಿ 50 ಸ್ಥಾನಕ್ಕೆ ಕುಸಿಯುವುದು ಖಚಿತ ಎಂದು ಭವಿಷ್ಯ ನುಡಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor