ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಸ್ಟಿಂಗ್ ಆಪರೇಷನ್ ವಿಚಾರ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದ್ದು, ಸ್ಟಿಂಗ್ ವಿಚಾರವಾಗಿ ಸಿಡಿ ಫ್ಯಾಕ್ಟರಿ ಹಿಂದೆ ಕೆಪಿಸಿಸಿ ಕಚೇರಿಯಲ್ಲಿತ್ತು. ಈಗ ವಿಧಾನಸೌಧಕ್ಕೆ ಶಿಫ್ಟ್ ಆಗಿದೆ ಎಂದು ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲ ದಿನಗಳಿಂದ ಸಿಎಂ ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ ಇದರ ಬಗ್ಗೆ ತನಿಖೆ ನಡೆಸಲು ಸಿಎಂ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಆಸಕ್ತಿ ಕಾಣಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಇದೆ ಎಂದರೆ ಅದಕ್ಕೆ ಸಿದ್ದರಾಮಯ್ಯನವರೇ ಕಾರಣ. ಅಂತಹವರನ್ನೇ ಯೂಸ್ ಆಂಡ್ ಥ್ರೋ ಮಾಡಲಾಗಿದೆ ಎಂದು ಹೇಳಿದರು.
ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರು ಕಾಲಹರಣ ಮಾಡುವುದನ್ನು ಬಿಟ್ಟು ಅದಕ್ಕೊಂದು ತಾರ್ಕಿಕ ಅಂತ್ಯ ಹಾಡಬೇಕು. ಸಿಡಿ, ಪೆನ್ ಡ್ರೈವ್ ಫ್ಯಾಕ್ಟರಿ ಯಾರದ್ದು ಎಂದು ಕಾಂಗ್ರೆಸ್ ನಾಯಕರೇ ಮಾತನಾಡಿಕೊಳ್ಳುತ್ತಿದ್ದಾರೆ. ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರೇ ಈ ಕುರಿತು ಹೇಳಿಕೆ ನೀಡಿದ್ದು, ಕಾಂಗ್ರೆಸ್ ಶಾಸಕರು, ಸಚಿವರು ಎಲ್ಲರೂ ಭಯಭೀತರಾಗಿದ್ದಾರೆ. ಈ ಹಿಂದೆ ಕೆಪಿಸಿಸಿ ಕಚೇರಿಯಲ್ಲಿದ್ದ ಸಿಡಿ ಫ್ಯಾಕ್ಟರಿ ಈಗ ವಿಧಾನಸೌಧಕ್ಕೆ ಶಿಫ್ಟ್ ಆಗಿದೆ” ಎಂದು ಮಾರ್ಮಿಕವಾಗಿ ನುಡಿದರು.
