ಯಡಿಯೂರಪ್ಪರವರ ವಿರುದ್ಧ ವಾಟ್ಸ್ಯಾಪ್​ನಲ್ಲಿ ಅಪಪ್ರಚಾರ! ಬಿ.ವೈ ವಿಜಯೇಂದ್ರ ಹೇಳಿದ್ದೇನು? ಮೈಗೆ ಎಣ್ಣೆ ಹಚ್ಚಿಕೊಂಡು ಎಂಬ ಪದ ಬಳಸಿದ್ದೇಕೆ ಸಂಸದ ರಾಘವೇಂದ್ರ ?

B.Y.Vijayendra and B.Y.Raghavendra commented on various issues in Shimoga.ಶಿವಮೊಗ್ಗದಲ್ಲಿ ಬಿ.ವೈ.ವಿಜಯೇಂದ್ರ ಹಾಗೂ ಬಿ.ವೈ.ರಾಘವೇಂದ್ರರವರು ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ

ಯಡಿಯೂರಪ್ಪರವರ ವಿರುದ್ಧ ವಾಟ್ಸ್ಯಾಪ್​ನಲ್ಲಿ ಅಪಪ್ರಚಾರ! ಬಿ.ವೈ ವಿಜಯೇಂದ್ರ ಹೇಳಿದ್ದೇನು? ಮೈಗೆ ಎಣ್ಣೆ ಹಚ್ಚಿಕೊಂಡು ಎಂಬ ಪದ ಬಳಸಿದ್ದೇಕೆ ಸಂಸದ ರಾಘವೇಂದ್ರ ?

KARNATAKA NEWS/ ONLINE / Malenadu today/ Sep 18, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಿನ್ನೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರರವರು ಹಿಂದಿನ ಚುನಾವಣಾ ಸಂದರ್ಭದಲ್ಲಿ ವಿಜಯೇಂದ್ರ ಗೆಲುವಿನ ನಂತರ  ಬೆಂಗಳೂರಿನಲ್ಲಿರುತ್ತಾರೆ. ಅವರು ಜನಸಾಮಾನ್ಯರಿಗೆ ಅಪರೂಪವಾಗಲಿದ್ದಾರೆ ಎಂದು ಬಿಂಬಿಸಲಾಗಿತ್ತು. ಈಗ ಶಿಕಾರಿಪುರದಲ್ಲಿಯೇ ಶಾಸಕರ ಕಚೇರಿ ತೆರೆದು ವಾರದಲ್ಲಿ 3-4 ದಿನ ಜನತೆಯ ಸಮಸ್ಯೆ ಪರಿಹಾರಕ್ಕೆ ಮೀಸಲಿಟ್ಟಿದ್ದೇವೆ. ಇದರೊಂದಿಗೆ 130ಕ್ಕೂ ಅಧಿಕ ಗ್ರಾಮಗಳಿಗೆ ತೆರಳಿ, ಸಾರ್ವಜನಿಕ ಸಮಸ್ಯೆ ಆಲಿಸಿ ಪರಿಹಾರಕ್ಕೆ ಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ. 

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ವಿರುದ್ಧ ವಾಟ್ಸ್ಯಾಪ್​ಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ. ವಿರೋಧಿಗಳು ಯಡಿಯೂರಪ್ಪರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವಾಗಿಲ್ಲ ಎಂಬಂತೆ ವಾಟಾಪ್‌ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದಾರೆ ಎಂಧು ಶಾಸಕ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿದ ಅವರು, ಬಿಎಸ್​ವೈ ತಾಲೂಕಿನ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ದೊರಕಿಸುವ ಜತೆಗೆ ವೈಯುಕ್ತಿಕ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ ಎಂದರು. ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಮೈಗೆ ಎಣ್ಣೆ ಹಚ್ಚಿಕೊಂಡು ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುತ್ತಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದ್ದಾರೆ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯಸರ್ಕಾರದ 100 ದಿನ ಗ್ಯಾರಂಟಿಗಳ ಅನುಷ್ಠಾನದಲ್ಲೇ ಕಾಲ ಕಳೆದಿದೆ ಎಂದು ವ್ಯಂಗ್ಯವಾಡಿದ್ರು. ಸಚಿವರಿಗೆ ಹೊಸ ಕಾರುಗಳನ್ನು ಖರೀದಿ ಮಾಡಿದೆ. ಆದರೆ ಬರ ಪರಿಹಾರ ವಿತರಣೆಗೆ ಹಣ ಇಲ್ಲ ಎನ್ನುತ್ತಿದೆ.  135 ಸ್ಥಾನ ಗೆಲ್ಲಿಸಿ ಅಧಿಕಾರ ನೀಡಿದ್ದಾರೆ. ಅವರ ವಿಶ್ವಾಸವನ್ನು ಸರ್ಕಾರ ಉಳಿಸಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ರು. 


ಇನ್ನಷ್ಟು ಸುದ್ದಿಗಳು