ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿಯನ್ನ ಭೇಟಿಯಾದ ಟೀಚರ್ಸ್​! ಮಹತ್ವದ ಮನವಿ

ಹಂಚಿಕೊಳ್ಳಿ
WhatsApp Facebook X Telegram
C.S. Shadakshari Assures to Fulfill Demands of Hindi Teachers in Shivamogga
C.S. Shadakshari Assures to Fulfill Demands of Hindi Teachers in Shivamogga

C S Shadakshari / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಪದಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ನೆರವಾಗುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿರನ್ನ ಭೇಟಿಮಾಡಿ ಮನವಿ ನೀಡಿದ್ರು.

ಶಿಕ್ಷಕರು ಸಲ್ಲಿಸಿದ ಮನವಿ ಪತ್ರವನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಶಿಕ್ಷಕರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಇ ಈ ವಿಚಾರವಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದ್ರು. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದು ನಿಯೋಗಕ್ಕೆ ಭರವಸೆ ನೀಡಿದರು.

ಹಿಂದಿ ಭಾಷಾ ಶಿಕ್ಷಕರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಅವರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನೌಕರರ ಸಂಘದ ವತಿಯಿಂದ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡಲಾಗುವುದು ಎಂದರು.

ಇನ್ನೂ ಮನವಿ ಸಲ್ಲಿಸುವ ಈ ಸಂದರ್ಭದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾಗಿರುವ ಸಿದ್ದಬಸಪ್ಪ ಬಿ., ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ಕುಮಾರ್, ಪ್ರಮುಖರಾದ ಧರ್ಮಪ್ಪ, ಹೇಮಂತ್ ಸೇರಿದಂತೆ ಹಿಂದಿ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor