INFORMATION NEWS

ಪ್ರತಿ ಜಿಲ್ಲೆಯಿಂದ 60 ಶಿಕ್ಷಕರು! ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

National Teachers Award 2026 / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / 2026 ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಅರ್ಹ ಶಾಲಾ ಶಿಕ್ಷಕರಿಂದ ಆನ್‌ಲೈನ್ ಮೂಲಕ ಸ್ವಯಂ ನಾಮನಿರ್ದೇಶನಗಳನ್ನು ಆಹ್ವಾನಿಸಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಜೂನ್ 25, 2026 ರಂದು ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.

ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಸೂಚನೆಯ ಮೇರೆಗೆ ಈ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 15, 2026 ರಿಂದಲೇ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪೋರ್ಟಲ್ ಅನ್ನು ನಾಮನಿರ್ದೇಶನಗಳಿಗೆ ಮುಕ್ತಗೊಳಿಸಲಾಗಿದೆ ಅಂತಾ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಕುರಿತಾದ ವರದಿಯ ಪ್ರಮುಖ ಅಂಶಗಳು ಹೀಗಿದೆ

ಪ್ರಮುಖ ಅಂಶಗಳು

  • ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಶಿಕ್ಷಕರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಆಸಕ್ತ ಶಿಕ್ಷಕರು ಪೋರ್ಟಲ್‌ನಲ್ಲಿ ನೊಂದಾಯಿಸಿಕೊಂಡು ತಮ್ಮ ಸ್ವಯಂ ನಾಮನಿರ್ದೇಶನಗಳನ್ನು ಸಲ್ಲಿಸಲು ಜುಲೈ 10, 2026 ಕೊನೆಯ ದಿನಾಂಕವಾಗಿರುತ್ತದೆ.
  • ಅಲ್ಲದೆ, ಅರ್ಜಿದಾರರು ತಮ್ಮ ಅರ್ಜಿಗಳನ್ನು ಅಂತಿಮಗೊಳಿಸಿ ಸಲ್ಲಿಸಲು ಜುಲೈ 13, 2026 ರವರೆಗೆ ಅವಕಾಶ ಕಲ್ಪಿಸಲಾಗಿದೆ.
  • ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲೆಗಳಿಗೆ ಈ ಮಾಹಿತಿಯನ್ನು ವ್ಯಾಪಕವಾಗಿ ಪ್ರಚಾರಗೊಳಿಸುವಂತೆ ಸೂಚಿಸಲಾಗಿದೆ.

ಅರ್ಹ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಮತ್ತು ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ಸಲ್ಲಿಸುವಂತೆ ಮಾಡಲು ಅಧಿಕಾರಿಗಳು ಮಾರ್ಗಸೂಚಿಗಳನ್ನು ಅಧ್ಯಯನ ಮಾಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ವಿಶೇಷ ಸೂಚನೆಯಾಗಿ, ಪ್ರತಿ ಜಿಲ್ಲೆಯಿಂದ ಕಡ್ಡಾಯವಾಗಿ 60 ಶಿಕ್ಷಕರು ನಾಮನಿರ್ದೇಶನ ಮಾಡುವಂತೆ ಆಡಳಿತ ಮತ್ತು ಅಭಿವೃದ್ಧಿ ವಿಭಾಗದ ಉಪನಿರ್ದೇಶಕರು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ